ADVERTISEMENT

ಮುಂಗಾರು ಚೇತರಿಕೆ, ಸೂಚ್ಯಂಕ ಏರಿಕೆ

ಇಂಧನ, ವಾಹನ, ಬ್ಯಾಂಕ್‌ ಷೇರುಗಳ ಉತ್ತಮ ಗಳಿಕೆ

​ಪ್ರಜಾವಾಣಿ ವಾರ್ತೆ
Published 25 ಜೂನ್ 2019, 20:00 IST
Last Updated 25 ಜೂನ್ 2019, 20:00 IST
   

ಮುಂಬೈ (ಪಿಟಿಐ): ಮುಂಗಾರು ತುಸು ಚೇತರಿಕೆ ಕಂಡಿರುವುದರಿಂದ ಹೂಡಿಕೆ ಚಟುವಟಿಕೆ ಹೆಚ್ಚಾಗಿದೆ. ಇದರಿಂದ ಷೇರುಪೇಟೆಗಳಲ್ಲಿ ಮಂಗಳವಾರ ಸಕಾರಾತ್ಮಕ ಚಟುವಟಿಕೆ ನಡೆಯಿತು.

ಜಾಗತಿಕ ವಾಣಿಜ್ಯ ಸಂಘರ್ಷ ಮತ್ತು ಮಧ್ಯಪ್ರಾಚ್ಯದಲ್ಲಿನ ಉದ್ವಿಗ್ನತೆಯನ್ನೂ ಮೀರಿ ಮುಂಗಾರಿನ ಕಡೆಗೆ ವಹಿವಾಟುದಾರರು ಹೆಚ್ಚಿನ ಗಮನ ನೀಡಿದ್ದಾರೆ ಎಂದು ತಜ್ಞರು ಹೇಳಿದ್ದಾರೆ.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ (ಬಿಎಸ್‌ಇ) 313 ಅಂಶ ಚೇತರಿಕೆ ಕಂಡು 39,435 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿತು.

ADVERTISEMENT

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ 97 ಅಂಶ ಹೆಚ್ಚಾಗಿ 11,796 ಅಂಶಗಳಲ್ಲಿ ವಹಿವಾಟು ಅಂತ್ಯ
ಗೊಂಡಿದೆ. ರಿಲಯನ್ಸ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ ಷೇರುಗಳು ಶೇ 2.63ರಷ್ಟು ಅತಿ ಹೆಚ್ಚಿನ ಗಳಿಕೆ ಕಂಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.