ಮುಂಬೈ : ದೇಶದ ಆರ್ಥಿಕತೆ ಮೇಲಿನ ದಿಗ್ಬಂಧನ ಸಡಿಲಿಕೆ ಮಾಡಲು ಆರಂಭಿಸಿರುವ ಪ್ರಕ್ರಿಯೆಯಿಂದಾಗಿ ಷೇರುಪೇಟೆಗಳಲ್ಲಿ ಸೋಮವಾರ ಸಕಾರಾತ್ಮಕ ವಹಿವಾಟು ನಡೆಯಿತು.
ಹಣಕಾಸು, ಎಫ್‌ಎಂಸಿಜಿ ಮತ್ತು ಇಂಧನ ವಲಯದ ಷೇರುಗಳು ಉತ್ತಮ ಖರೀದಿ ವಹಿವಾಟಿಗೆ ಒಳಗಾಗಿ ಸೂಚ್ಯಂಕಗಳು ಏರಿಕೆ ಕಾಣುವಂತಾಯಿತು.
ಮುಂಬೈ ಷೇರುಪೇಟೆ (ಬಿಎಸ್‌ಇ) ಸಂವೇದಿ ಸೂಚ್ಯಂಕ 879 ಅಂಶ ಜಿಗಿತ ಕಂಡು 33,303 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.
ರಾಷ್ಟ್ರೀಯ ಷೇರುಪೇಟೆ (ಎನ್‌ಎಸ್‌ಇ) ಸೂಚ್ಯಂಕ ನಿಫ್ಟಿ 246 ಅಂಶ ಹೆಚ್ಚಾಗಿ 9,826 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.
ದಿನದ ವಹಿವಾಟಿನಲ್ಲಿ ಬಜಾಜ್ ಫೈನಾನ್ಸ್ ಷೇರು ಶೇ 11ರಷ್ಟು ಗರಿಷ್ಠ ಗಳಿಕೆ ಕಂಡಿತು.
ಬಿಎಸ್‌ಇ ಮಧ್ಯಮ ಮತ್ತು ಸಣ್ಣ ಶ್ರೇಣಿಯ ಸೂಚ್ಯಂಕಗಳು ಶೇ 3.03ರಷ್ಟು ಏರಿಕೆ ಕಂಡವು.
ರೂಪಾಯಿ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್ ಎದುರು ರೂಪಾಯಿ ಮೌಲ್ಯ 8 ಪೈಸೆ ಹೆಚ್ಚಾಗಿ ಒಂದು ಡಾಲರ್‌ಗೆ ₹ 75.54 ರಂತೆ ವಿನಿಮಯಗೊಂಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.