ADVERTISEMENT

ಷೇರುಪೇಟೆ ವಹಿವಾಟು ಚೇತರಿಕೆ

ಪಿಟಿಐ
Published 6 ಆಗಸ್ಟ್ 2020, 12:56 IST
Last Updated 6 ಆಗಸ್ಟ್ 2020, 12:56 IST
ಷೇರುಪೇಟೆ
ಷೇರುಪೇಟೆ   

ಮುಂಬೈ: ಬಡ್ಡಿದರದಲ್ಲಿ ಬದಲಾವಣೆ ಮಾಡದೇ ಇದ್ದರೂ, ಆರ್ಥಿಕ ಬೆಳವಣಿಗೆಗೆ ಉತ್ತೇಜನ ನೀಡಲು ಹೊಂದಾಣಿಕೆಯ ನಿಲುವು ಅನುಸರಿಸುವುದಾಗಿ ಆರ್‌ಬಿಐ ಹೇಳಿರುವುದು ಷೇರುಪೇಟೆಗಳ ಸೂಚ್ಯಂಕದ ಏರಿಕೆಗೆ ಕಾರಣವಾಯಿತು.

ಮುಂಬೈ ಷೇರುಪೇಟೆ (ಬಿಎಸ್‌ಇ) ಸಂವೇದಿ ಸೂಚ್ಯಂಕ 362 ಅಂಶ ಹೆಚ್ಚಾಗಿ 38,025 ಅಂಶಗಳಿಗೆ ತಲುಪಿತು. ರಾಷ್ಟ್ರೀಯ ಷೇರುಪೇಟೆ (ಎನ್‌ಎಸ್‌ಇ) ಸೂಚ್ಯಂಕ ನಿಫ್ಟಿ 99 ಅಂಶ ಹೆಚ್ಚಾಗಿ 11,200 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿತು.

ದಿನದ ವಹಿವಾಟಿನಲ್ಲಿ ಟಾಟಾ ಸ್ಟೀಲ್‌ ಷೇರು ಶೇಕಡ 4ರಷ್ಟು ಗಳಿಕೆ ಕಂಡಿತು. ಇನ್ಫೊಸಿಸ್‌, ಬಜಾಜ್‌ ಫೈನಾನ್ಸ್‌, ಟಿಸಿಎಸ್‌, ಎಚ್‌ಸಿಎಲ್‌ ಟೆಕ್‌, ಐಸಿಐಸಿಐ ಬ್ಯಾಂಕ್‌ ಮತ್ತು ಟೆಕ್‌ ಮಹೀಂದ್ರಾ ಕಂಪನಿಗಳ ಷೇರುಗಳ ಮೌಲ್ಯವೂ ಹೆಚ್ಚಾಗಿದೆ.

ADVERTISEMENT

ಆರ್‌ಬಿಐನ ಸಮತೋಲಿತ ನಿರ್ಧಾರಕ್ಕೆ ಮಾರುಕಟ್ಟೆಯಲ್ಲಿ ಹರ್ಷ ವ್ಯಕ್ತವಾಗಿದೆ. ನಿರೀಕ್ಷೆಯಂತೆಯೇ ಆರ್‌ಬಿಐ ನಿರ್ಧಾರ ತೆಗೆದುಕೊಂಡಿದೆ. ನಗದು ಲಭ್ಯತೆಗೆ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ತಜ್ಞರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.