ADVERTISEMENT

ಆರ್‌ಬಿಐ ಪ್ರಭಾವ: ಸೂಚ್ಯಂಕ ಇಳಿಕೆ

ಪಿಟಿಐ
Published 5 ಡಿಸೆಂಬರ್ 2018, 18:52 IST
Last Updated 5 ಡಿಸೆಂಬರ್ 2018, 18:52 IST

ಮುಂಬೈ: ಆರ್‌ಬಿಐ, ಅಲ್ಪಾವದಿ ಬಡ್ಡಿದರಗಳಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿರುವುದು ಷೇರುಪೇಟೆಯಲ್ಲಿ ಬುಧವಾರ ನಕಾರಾತ್ಮಕ ವಹಿವಾಟು ನಡೆಯುವಂತೆ ಮಾಡಿದೆ.

ಅಮೆರಿಕ–ಚೀನಾ ನಡುವಣ ವಾಣಿಜ್ಯ ಸಂಘರ್ಷಕ್ಕೆ ಹೊಸ ವಿವಾದ ತಳುಕು ಹಾಕಿರುವುದರಿಂದ ಜಾಗತಿಕ ಮಾರುಕಟ್ಟೆಗಳಲ್ಲಿ ಮಾರಾಟದ ಒತ್ತಡ ಕಂಡುಬಂದಿತು. ಇದು ದೇಶದ ಷೇರುಪೇಟೆಗಳ ಮೇಲೆಯೂ ಪರಿಣಾಮ ಬೀರಿತು.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕವು (ಬಿಎಸ್‌ಇ) 250 ಅಂಶ ಇಳಿಕೆಯಾಗಿ 35,884 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.

ADVERTISEMENT

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ, 87 ಅಂಶ ಇಳಿಕೆ ಕಂಡು 10,784 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.

ಲೋಹ, ಔಷಧ, ವಾಹನ ಮತ್ತು ಬ್ಯಾಂಕಿಂಗ್ ಷೇರುಗಳು ಹೆಚ್ಚಿನ ಇಳಿಕೆಗೆ ಒಳಗಾದವು.

ಡಾಲರ್‌ ಎದುರು ರೂಪಾಯಿ ಮೌಲ್ಯ 11 ಪೈಸೆ ಇಳಿಕೆಯಾಗಿ ಒಂದು ಡಾಲರ್‌ಗೆ ₹ 70.60ಕ್ಕೆ ತಲುಪಿದೆ. ಇದು ಸಹ ಸೂಚ್ಯಂಕವನ್ನು ಇಳಿಕೆ ಕಾಣುವಂತೆ ಮಾಡಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್‌ ಕಚ್ಚಾ ತೈಲ ಶೇ 0.53ರಷ್ಟು ಇಳಿಕೆಯಾಗಿ ಒಂದು ಬ್ಯಾರೆಲ್‌ಗೆ 61.75 ಡಾಲರ್‌ಗಳಿಗೆ ತಲುಪಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.