
ಪಿಟಿಐ
ಮುಂಬೈ: ದೇಶದ ಷೇರುಪೇಟೆ ಸೂಚ್ಯಂಕಗಳು ಮಂಗಳವಾರದ ವಹಿವಾಟಿನಲ್ಲಿ ಕುಸಿತ ಕಂಡವು. ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 519 ಅಂಶ ಹಾಗೂ ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 165 ಅಂಶ ಇಳಿಕೆ ಕಂಡಿವೆ.
ಲೋಹ, ಐ.ಟಿ., ಯುಟಿಲಿಟಿ ವಲಯದ ಷೇರುಗಳನ್ನು ಹೂಡಿಕೆದಾರರು ಲಾಭ ಗಳಿಕೆ ಉದ್ದೇಶದಿಂದ ಮಾರಾಟ ಮಾಡಿದ್ದುದು ಹಾಗೂ ವಿದೇಶಿ ಹೂಡಿಕೆಯ ಹೊರಹರಿವು ಈ ಇಳಿಕೆಗೆ ಕಾರಣಗಳು ಎಂದು ವರ್ತಕರು ತಿಳಿಸಿದ್ದಾರೆ. ಗುರುನಾನಕ್ ಜಯಂತಿ ಕಾರಣಕ್ಕೆ ಷೇರುಪೇಟೆಗಳಿಗೆ ಬುಧವಾರ ರಜೆ ಇರಲಿದೆ.
‘ಪ್ರಮುಖ ವಲಯಗಳಲ್ಲಿ ಲಾಭ ಗಳಿಕೆಯ ವಹಿವಾಟು ನಡೆಯಿತು. ಇದು ಇಡೀ ಷೇರುಪೇಟೆಯ ಮೇಲೆ ಪರಿಣಾಮ ಬೀರಿತು’ ಎಂದು ರೆಲಿಗೇರ್ ಬ್ರೋಕಿಂಗ್ ಲಿಮಿಟೆಡ್‌ನ ಸಂಶೋಧನಾ ವಿಭಾಗದ ಹಿರಿಯ ಉಪಾಧ್ಯಕ್ಷ ಅಜಿತ್ ಮಿಶ್ರಾ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.