ಮುಂಬೈ: ದೇಶದ ಷೇರುಪೇಟೆಗಳ ವಾರದ ವಹಿವಾಟು ನಕಾರಾತ್ಮಕವಾಗಿ ಅಂತ್ಯಗೊಂಡಿದೆ.
ಮುಂಬೈ ಷೇರುಪೇಟೆ (ಬಿಎಸ್‌ಇ) ಸಂವೇದಿ ಸೂಚ್ಯಂಕ 545 ಅಂಶ ಇಳಿಕೆಯಾಗಿ 31,097 ಅಂಶಗಳಲ್ಲಿ ವಾರದ ವಹಿವಾಟು ಅಂತ್ಯವಾಗಿದೆ.
ರಾಷ್ಟ್ರೀಯ ಷೇರುಪೇಟೆ (ಎನ್‌ಎಸ್‌ಇ) ಸೂಚ್ಯಂಕ ನಿಫ್ಟಿ 114 ಅಂಶ ಇಳಿಕೆಯಾಗಿ 9,136 ಅಂಶಗಳಲ್ಲಿ ವಾರದ ವಹಿವಾಟು ಅಂತ್ಯಗೊಂಡಿದೆ.
ದೇಶದಲ್ಲಿ ಕೋವಿಡ್–19 ಪ್ರಕರಣಗಳು ಹೆಚ್ಚಾಗುತ್ತಿರುವುದು, ವಿತ್ತೀಯ ಉತ್ತೇಜನ ಪ್ಯಾಕೇಜ್‌ಗಳು ಆರ್ಥಿಕ ಚೇತರಿಕೆಗೆ ಪರಿಣಾಮಕಾರಿ ಆಗುವ ಬಗೆಗಿನ ಅನಿಶ್ಚಿತತೆಯು ನಕಾರಾತ್ಮಕ ವಹಿವಾಟಿಗೆ ಕಾರಣವಾಗಿದೆ.
ವಿದೇಶಿ ಬಂಡವಾಳ ಹೊರಹರಿವು ಸಹ ಸೂಚ್ಯಂಕಗಳನ್ನು ಇಳಿಕೆ ಕಾಣುವಂತೆ ಮಾಡಿದೆ.
ರೂಪಾಯಿ: ವಾರದ ವಹಿವಾಟಿನಲ್ಲಿ ಡಾಲರ್ ಎದುರು ರೂಪಾಯಿ ಮೌಲ್ಯ 4 ಪೈಸೆ ಇಳಿಕೆ ಕಂಡಿದ್ದು, ಒಂದು ಡಾಲರ್‌ಗೆ ₹ 75.54ಕ್ಕೆ ತಲುಪಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.