ಮುಂಬೈ /ಬ್ಯಾಂಕಾಕ್: ಐ.ಟಿ ಮತ್ತು ವಾಹನ ಕಂಪನಿಗಳ ಷೇರು ಖರೀದಿ ಹೆಚ್ಚಳದ ಕಾರಣದಿಂದಾಗಿ ದೇಶದ ಷೇರುಪೇಟೆ ಸೂಚ್ಯಂಕಗಳು ಸೋಮವಾರದ ವಹಿವಾಟಿನಲ್ಲಿ ಏರಿಕೆ ಕಂಡಿವೆ.
ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 329 ಅಂಶ ಏರಿಕೆಯಾಗಿ, 81,635ಕ್ಕೆ ತಲುಪಿದೆ. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 97 ಅಂಶ ಹೆಚ್ಚಳವಾಗಿ, 24,967ಕ್ಕೆ ವಹಿವಾಟು ಕೊನೆಗೊಳಿಸಿದೆ.
ಅಮೆರಿಕದ ಫೆಡರಲ್ ರಿಸರ್ವ್ ಸೆಪ್ಟೆಂಬರ್‌ನಲ್ಲಿ ಬಡ್ಡಿ ದರ ಕಡಿತಗೊಳಿಸುವ ನಿರೀಕ್ಷೆ ಹೆಚ್ಚಿಸಿದೆ. ಇದು ದೇಶದ ಐ.ಟಿ ಕಂಪನಿಗಳ ಷೇರು ಖರೀದಿ ಹೆಚ್ಚಳಕ್ಕೆ ಕಾರಣವಾಗಿದ್ದರಿಂದ ಸೂಚ್ಯಂಕಗಳು ಏರಿಕೆ ಕಂಡವು ಎಂದು ಜಿಯೊಜಿತ್ ಇನ್ವೆಸ್ಟ್‌ಮೆಂಟ್ಸ್‌ನ ಸಂಶೋಧನಾ ವಿಭಾಗದ ಮುಖ್ಯಸ್ಥ ವಿನೋದ್ ನಾಯರ್ ಹೇಳಿದ್ದಾರೆ. ಪ್ರಸ್ತಾವಿತ ಜಿಎಸ್‌ಟಿ ಸರಳೀಕರಣವು ಸಹ ಸೂಚ್ಯಂಕಗಳ ಏರಿಕೆಗೆ ನೆರವಾದವು ಎಂದು ತಿಳಿಸಿದ್ದಾರೆ.
ಅಮೆರಿಕದ ಫೆಡರಲ್ ರಿಸರ್ವ್‌ನ ಅಧ್ಯಕ್ಷ ಜೆರೋಮ್ ಪೊವೆಲ್ ಅವರು ಬಡ್ಡಿ ದರ ಕಡಿತಗೊಳಿಸುವ ಸೂಚನೆ ನೀಡಿದ್ದಾರೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹ ಬಡ್ಡಿ ದರ ಇಳಿಕೆ ಮಾಡುವಂತೆ ಇತ್ತೀಚೆಗೆ ಒತ್ತಡ ಹೇರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.