ನವದೆಹಲಿ: ಅಮೆರಿಕದ ಸುಂಕ ಜಾರಿ ಮತ್ತು ವಿದೇಶಿ ಬಂಡವಾಳದ ಹೊರಹರಿವಿನಿಂದ ಶುಕ್ರವಾರದ ವಹಿವಾಟಿನಲ್ಲಿ ದೇಶದ ಷೇರುಪೇಟೆ ಸೂಚ್ಯಂಕಗಳು ಇಳಿಕೆ ಆಗಿವೆ.
ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 270 ಅಂಶ ಇಳಿಕೆಯಾಗಿ, 79,809ಕ್ಕೆ ವಹಿವಾಟು ಅಂತ್ಯಗೊಂಡಿದೆ. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 74 ಅಂಶ ಕಡಿಮೆಯಾಗಿ, 24,426ಕ್ಕೆ ಕೊನೆಗೊಂಡಿದೆ.
ಕಳೆದ ಮೂರು ವಹಿವಾಟಿನ ದಿನದಲ್ಲಿ ಷೇರು ಸೂಚ್ಯಂಕಗಳ ಇಳಿಕೆಯಿಂದ ಹೂಡಿಕೆದಾರರ ಸಂಪತ್ತು ₹11.21 ಲಕ್ಷ ಕೋಟಿ ಕರಗಿದೆ. ಸೆನ್ಸೆಕ್ಸ್ 1,826 ಮತ್ತು ನಿಫ್ಟಿ 540 ಅಂಶ ಇಳಿಕೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.