
ಮುಂಬೈ: ವಿದೇಶಿ ಬಂಡವಾಳದ ನಿರಂತರ ಹೊರಹರಿವು ಮತ್ತು ಜಾಗತಿಕ ಷೇರುಪೇಟೆಗಳಲ್ಲಿ ದುರ್ಬಲ ಪ್ರವೃತ್ತಿ ಹಿನ್ನೆಲೆ ಶುಕ್ರವಾರದ ಆರಂಭಿಕ ವಹಿವಾಟಿನಲ್ಲಿ ಭಾರತೀಯ ಷೇರು ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಕುಸಿತ ದಾಖಲಿಸಿವೆ.
30 ಷೇರುಗಳ ಸೆನ್ಸೆಕ್ಸ್ 631.93 ಅಂಶ ಕುಸಿದು 82,679.08ರಲ್ಲಿ ವಹಿವಾಟು ಆರಂಭಿಸಿದರೆ, 50 ಷೇರುಗಳ ಎನ್‌ಎಸ್‌ಇ ನಿಫ್ಟಿ 184.55 ಅಂಶ ಕುಸಿದು 25,325.15 ವಹಿವಾಟು ಆರಂಭಿಸಿತು.
ಸೆನ್ಸೆಕ್ಸ್ ಕಂಪನಿಗಳ ಪೈಕಿ ಭಾರ್ತಿ ಏರ್‌ಟೆಲ್, ಎಚ್‌ಸಿಎಲ್ ಟೆಕ್, ಟೆಕ್ ಮಹೀಂದ್ರ, ಎನ್‌ಟಿಪಿಸಿ, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಮತ್ತು ಮಾರುತಿ ನಷ್ಟದೊಂದಿಗೆ ವಹಿವಾಟು ಆರಂಭಿಸಿವೆ. ಆದರೂ, ಐಟಿಸಿ, ಐಸಿಐಸಿಐ ಬ್ಯಾಂಕ್, ಎಟರ್ನಲ್ ಮತ್ತು ಪವರ್ ಗ್ರಿಡ್ ಲಾಭ ಕಂಡಿವೆ.
ಏಷ್ಯಾ ಷೇರುಪೇಟೆಗಳ ಪೈಕಿ ದಕ್ಷಿಣ ಕೊರಿಯಾದ ಕಾಸ್ಪಿ, ಜಪಾನ್‌ನ ನಿಕ್ಕಿ 225 ಸೂಚ್ಯಂಕ, ಹಾಂಗ್‌ಕಾಂಗ್‌ನ ಹ್ಯಾಂಗ್ ಸೆಂಗ್ ಸೂಚ್ಯಂಕ ಕುಸಿತದೊಂದಿಗೆ ಮುಂದುವರಿದಿವೆ.
ಗುರುವಾರ ಅಮೆರಿಕ ಷೇರುಪೇಟೆಗಳು ಕೊಂಚ ಕುಸಿತದೊಂದಿಗೆ ವಹಿವಾಟು ಅಂತ್ಯಗೊಳಿಸಿದ್ದವು.
ಗುರುವಾರ ವಿದೇಶಿ ಸಾಂಸ್ಥಿಕ ಹೂಡಿಕೆದಾರರು(ಎಫ್‌ಐಐ) ₹3,263.21 ಕೋಟಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದರೆ, ದೇಶೀಯ ಸಾಂಸ್ಥಿಕ ಹೂಡಿಕೆದಾರರು(ಡಿಐಐ) ₹5,283.91 ಕೋಟಿ ಮೌಲ್ಯದ ಷೇರುಗಳನ್ನು ಖರೀದಿಸಿದ್ದಾರೆ ಎಂದು ವಿನಿಮಯ ಕೇಂದ್ರ ದತ್ತಾಂಶದಿಂದ ತಿಳಿದುಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.