ಮುಂಬೈ: ಈ ತಿಂಗಳಲ್ಲಿ ಅಮೆರಿಕದ ಕೇಂದ್ರೀಯ ಬ್ಯಾಂಕ್ ಫೆಡರಲ್ ರಿಸರ್ವ್‌ನಿಂದ ಬಡ್ಡಿ ದರ ಕಡಿತದ ಆಶಯದ ಹಿನ್ನೆಲೆ ಜಾಗತಿಕ ಷೇರುಪೇಟೆಗಳಲ್ಲಿ ಏರಿಕೆ ಹಿನ್ನೆಲೆಯಲ್ಲಿ ದೇಶೀಯ ಷೇರುಪೇಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಏರಿಕೆಯೊಂದಿಗೆ ಆರಂಭವಾಗಿವೆ.
ಐಟಿ ವಲಯದ ಷೇರುಗಳ ಏರಿಕೆಯೂ ಸೂಚ್ಯಂಕ ಮೇಲ್ಮುಖವಾಗಲು ಪ್ರಮುಖ ಕಾರಣವಾಗಿದೆ.
ಆರಂಭಿಕ ವಹಿವಾಟಿನಲ್ಲಿ 30 ಷೇರುಗಳ ಬಿಎಸ್‌ಇ ಸೆನ್ಸೆಕ್ಸ್ 366.87 ಪಾಯಿಂಟ್‌ಗಳ ಏರಿಕೆ ಕಂಡು 81,154ಕ್ಕೆ ತಲುಪಿತ್ತು. 50 ಷೇರುಗಳ ಎನ್‌ಎಸ್‌ಇ ನಿಫ್ಟಿ 101.35 ಪಾಯಿಂಟ್‌ಗಳ ಏರಿಕೆ ಕಂಡು 24,874.50ಕ್ಕೆ ತಲುಪಿತ್ತು.
ಸೆನ್ಸೆಕ್ಸ್ ಸಂಸ್ಥೆಗಳ ಪೈಕಿ ಇನ್ಫೊಸಿಸ್, ಟೆಕ್ ಮಹೀಂದ್ರ, ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್, ಎಚ್‌ಸಿಎಲ್ ಟೆಕ್, ಅದಾನಿ ಪೋರ್ಟ್ಸ್ ಮತ್ತು ಲಾರ್ಸೆನ್ & ಟೂಬ್ರೊ ಪ್ರಮುಖ ಲಾಭ ಗಳಿಸಿದ ಸಂಸ್ಥೆಗಳಾಗಿವೆ.
ಆದರೂ, ಎಟರ್ನಲ್, ಟಾಟಾ ಸ್ಟೀಲ್, ಬಜಾಜ್ ಫೈನಾನ್ಸ್ ಮತ್ತು ಭಾರತ್ ಎಲೆಕ್ಟ್ರಾನಿಕ್ಸ್ ಷೇರುಗಳು ನಷ್ಟ ಕಂಡಿವೆ.
‘ಸೆಪ್ಟೆಂಬರ್ 17ರಂದು ಫೆಡರಲ್ ಬ್ಯಾಂಕ್‌ನಿಂದ ಬಡ್ಡಿ ದರ ಕಡಿತದ ಭರವಸೆಗಳು ಮತ್ತು ವರ್ಷದ ಉಳಿದ ಸಭೆಗಳಲ್ಲಿ ಮತ್ತಷ್ಟು ಕಡಿತಗಳ ಸಾಧ್ಯತೆಯ ಹಿನ್ನೆಲೆಯಲ್ಲಿ ನಿಫ್ಟಿ ಏರಿಕೆಯೊಂದಿಗೆ ವಹಿವಾಟು ನಡೆಸುವ ನಿರೀಕ್ಷೆಯಿದೆ’ಎಂದು ಮೆಹ್ತಾ ಈಕ್ವಿಟೀಸ್ ಲಿಮಿಟೆಡ್‌ನ ಹಿರಿಯ ಉಪಾಧ್ಯಕ್ಷ (ಸಂಶೋಧನೆ) ಪ್ರಶಾಂತ್ ತಾಪ್ಸೆ ಹೇಳಿದ್ದಾರೆ.
ಏಷ್ಯಾದ ಮಾರುಕಟ್ಟೆಗಳ ಪೈಕಿ ದಕ್ಷಿಣ ಕೊರಿಯಾದ ಕಾಸ್ಪಿ, ಜಪಾನ್‌ನ ನಿಕ್ಕಿ 225 ಸೂಚ್ಯಂಕ ಮತ್ತು ಹಾಂಗ್ ಕಾಂಗ್‌ನ ಹ್ಯಾಂಗ್ ಸೆಂಗ್ ಏರಿಕೆಯೊಂದಿಗೆ ವಹಿವಾಟು ನಡೆಸಿದರೆ, ಶಾಂಘೈನ ಎಸ್‌ಎಸ್‌ಇ ಕಾಂಪೋಸಿಟ್ ಸೂಚ್ಯಂಕ ಸೋಮವಾರ ಏರಿಕೆ ಕಂಡಿತ್ತು.
ಅಮೆರಿಕ ಮಾರುಕಟ್ಟೆಗಳು ಸೋಮವಾರ ಏರಿಕೆಯೊಂದಿಗೆ ಕೊನೆಗೊಂಡಿದ್ದವು.
ವಿದೇಶಿ ಸಾಂಸ್ಥಿಕ ಹೂಡಿಕೆದಾರರು (ಎಫ್‌ಐಐ) ಸೋಮವಾರ ₹2,170.35 ಕೋಟಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದಾರೆ.
ದೇಶೀಯ ಸಾಂಸ್ಥಿಕ ಹೂಡಿಕೆದಾರರು (ಡಿಐಐ) ₹3,014.30 ಕೋಟಿ ಮೌಲ್ಯದ ಷೇರುಗಳನ್ನು ಖರೀದಿಸಿದ್ದಾರೆ ಎಂದು ವಿನಿಮಯ ದತ್ತಾಂಶಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.