ಮುಂಬೈ: ಸತತ ಎರಡು ದಿನಗಳಿಂದ ಇಳಿಕೆ ಕಂಡಿದ್ದ ದೇಶದ ಷೇರುಪೇಟೆಯು ಮಂಗಳವಾರದ ವಹಿವಾಟಿನಲ್ಲಿ ಚೇತರಿಕೆ ಕಂಡಿದೆ.
ಬ್ಯಾಂಕಿಂಗ್ ಷೇರುಗಳ ಖರೀದಿ ಹೆಚ್ಚಳದಿಂದಾಗಿ ಮಾರುಕಟ್ಟೆಯಲ್ಲಿ ಸಕಾರಾತ್ಮಕ ವಹಿವಾಟು ನಡೆಯಿತು.
ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 535 ಅಂಶ ಏರಿಕೆ ಕಂಡು, 75,901 ಅಂಶಗಳಲ್ಲಿ ವಹಿವಾಟು ಮುಕ್ತಾಯಗೊಂಡಿತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 128 ಅಂಶ ಏರಿಕೆ ಕಂಡು 22,957 ಅಂಶಗಳಲ್ಲಿ ಸ್ಥಿರಗೊಂಡಿತು.
ಸೆನ್ಸೆಕ್ಸ್ ಗುಚ್ಛದಲ್ಲಿನ ಬಜಾಜ್ ಫೈನಾನ್ಸ್, ಎಕ್ಸಿಸ್ ಬ್ಯಾಂಕ್, ಬಜಾಜ್ ಫಿನ್‌ಸರ್ವ್, ಎಚ್‌ಡಿಎಫ್‌ಸಿ ಬ್ಯಾಂಕ್, ಟಾಟಾ ಮೋಟರ್ಸ್, ಟಾಟಾ ಸ್ಟೀಲ್, ಐಸಿಐಸಿಐ ಬ್ಯಾಂಕ್, ಮಹೀಂದ್ರ ಆ್ಯಂಡ್ ಮಹೀಂದ್ರ, ಜೊಮಾಟೊ, ಇಂಡಸ್ ಇಂಡ್ ಬ್ಯಾಂಕ್, ಮಾರುತಿ ಸುಜುಕಿ ಇಂಡಿಯಾ ಮತ್ತು ಭಾರ್ತಿ ಏರ್‌ಟೆಲ್ ಷೇರಿನ ಮೌಲ್ಯದಲ್ಲಿ ಏರಿಕೆಯಾಗಿದೆ.
ಸನ್ ಫಾರ್ಮಾ, ಎಲ್ ಆ್ಯಂಡ್ ಟಿ, ಎಚ್‌ಸಿಎಲ್ ಟೆಕ್ನಾಲಜೀಸ್, ಎನ್‌ಟಿಪಿಸಿ, ಪವರ್ ಗ್ರಿಡ್, ನೆಸ್ಲೆ ಇಂಡಿಯಾ, ಟಿಸಿಎಸ್, ಏಷ್ಯನ್ ಪೇಂಟ್ಸ್ ಷೇರಿನ ಮೌಲ್ಯದಲ್ಲಿ ಇಳಿಕೆಯಾಗಿದೆ.
© 2025 All Rights Reserved by The Printers (Mysore) Private Limited. Powered by Summit
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.