ADVERTISEMENT

ಷೇರುಪೇಟೆ ಸೂಚ್ಯಂಕ: ಸೆನ್ಸೆಕ್ಸ್ 487 ಅಂಶ ಏರಿಕೆ

ಪಿಟಿಐ
Published 28 ಜನವರಿ 2026, 13:18 IST
Last Updated 28 ಜನವರಿ 2026, 13:18 IST
ಸೆನ್ಸೆಕ್ಸ್
ಸೆನ್ಸೆಕ್ಸ್   

ಮುಂಬೈ: ಕೈಗಾರಿಕೆ, ಇಂಧನ ಮತ್ತು ಲೋಹ ವಲಯದ ಕಂಪನಿಗಳ ಷೇರುಗಳ ಖರೀದಿ ಹೆಚ್ಚಳದಿಂದ ದೇಶದ ಷೇರುಪೇಟೆ ಸೂಚ್ಯಂಕಗಳು ಬುಧವಾರದ ವಹಿವಾಟಿನಲ್ಲಿ ಏರಿಕೆ ಕಂಡಿವೆ.

ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 487 ಅಂಶ ಏರಿಕೆಯಾಗಿ, 82,344ಕ್ಕೆ ವಹಿವಾಟು ಅಂತ್ಯಗೊಂಡಿದೆ. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 167 ಅಂಶ ಹೆಚ್ಚಳವಾಗಿ, 25,342ಕ್ಕೆ ಕೊನೆಗೊಂಡಿದೆ.

‘ಭಾರತ ಮತ್ತು ಐರೋಪ್ಯ ಒಕ್ಕೂಟದ ನಡುವಿನ ಮುಕ್ತ ವ್ಯಾಪಾರ ಒಪ್ಪಂದದ ಮಾತುಕತೆ ಪೂರ್ಣಗೊಂಡ ಘೋಷಣೆ ಆಗಿದೆ. ಇದು ದೇಶದ ಷೇರುಪೇಟೆ ಸೂಚ್ಯಂಕಗಳ ಏರಿಕೆಗೆ ಕಾರಣವಾಯಿತು’ ಎಂದು ಎನ‍್ರಿಚ್‌ ಮನಿ ಸಂಸ್ಥೆಯ ಸಿಇಒ ಪೊನ್ಮುಡಿ ಆರ್‌. ಹೇಳಿದ್ದಾರೆ.

ADVERTISEMENT

ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್ ಮೌಲ್ಯ ಇಳಿಕೆ ಆಗಿರುವುದು ಮತ್ತು ವಿವಿಧ ದೇಶಗಳ ಮಾರುಕಟ್ಟೆಗಳು ಸಕಾರಾತ್ಮಕ ವಹಿವಾಟು ಕಂಡಿರುವುದು ದೇಶದ ಷೇರುಪೇಟೆ ಸೂಚ್ಯಂಕಗಳ ಏರಿಕೆಗೆ ಉತ್ತೇಜನ ನೀಡಿದವು ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.