ADVERTISEMENT

ಜಿಎಸ್‌ಟಿ ದರ ಪರಿಷ್ಕರಣೆ: ಷೇರು ಸೂಚ್ಯಂಕ ಏರಿಕೆ

ಪಿಟಿಐ
Published 4 ಸೆಪ್ಟೆಂಬರ್ 2025, 15:59 IST
Last Updated 4 ಸೆಪ್ಟೆಂಬರ್ 2025, 15:59 IST
ಷೇರು
ಷೇರು   

ಮುಂಬೈ: ಜಿಎಸ್‌ಟಿ ದರ ಪರಿಷ್ಕರಣೆಯ ತೀರ್ಮಾನವು ದೇಶದ ಷೇರುಪೇಟೆ ಸೂಚ್ಯಂಕಗಳು ಗುರುವಾರದ ವಹಿವಾಟಿನಲ್ಲಿ ಏರಿಕೆ ಕಾಣುವಂತೆ ಮಾಡಿದೆ.

ಆದರೆ, ರಿಲಯನ್ಸ್‌ ಇಂಡಸ್ಟ್ರೀಸ್‌ ಮತ್ತು ಇನ್ಫೊಸಿಸ್ ಕಂಪನಿಯ ಷೇರುಗಳನ್ನು ಹೂಡಿಕೆದಾರರು ಲಾಭ ಗಳಿಕೆಗಾಗಿ ಮಾರಾಟ ಮಾಡಲು ಮುಂದಾಗಿದ್ದರಿಂದ ಆರಂಭಿಕ ವಹಿವಾಟಿನಲ್ಲಿ ದಾಖಲಿಸಿದ್ದ ಗರಿಷ್ಠ ಮಟ್ಟವನ್ನು ಉಳಿಸಿಕೊಳ್ಳಲಾಗದೆ ಸೂಚ್ಯಂಕಗಳು ಇಳಿಕೆ ಕಂಡವು.

ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 150 ಅಂಶ ಹೆಚ್ಚಳವಾಗಿ, 80,718ಕ್ಕೆ ವಹಿವಾಟು ಅಂತ್ಯಗೊಂಡಿದೆ. ವಹಿವಾಟಿನ ವೇಳೆ 888 ಅಂಶ ಜಿಗಿತ ಕಂಡಿತ್ತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 19 ಅಂಶ ಏರಿಕೆಯಾಗಿ, 24,734ಕ್ಕೆ ಕೊನೆಗೊಂಡಿದೆ.

ADVERTISEMENT

ಮಹೀಂದ್ರ ಆ್ಯಂಡ್ ಮಹೀಂದ್ರ, ಬಜಾಜ್‌ ಫೈನಾನ್ಸ್, ಟ್ರೆಂಟ್, ಐಟಿಸಿ ಮತ್ತು ಎಚ್‌ಡಿಎಫ್‌ಸಿ ಬ್ಯಾಂಕ್‌ನ ಷೇರಿನ ಮೌಲ್ಯವು ಏರಿಕೆ ಕಂಡಿದೆ. ಮಾರುತಿ ಸುಜುಕಿ ಇಂಡಿಯಾ, ಭಾರತ್ ಎಲೆಕ್ಟ್ರಾನಿಕ್ಸ್, ಎಚ್‌ಸಿಎಲ್‌ ಟೆಕ್, ಎನ್‌ಟಿಪಿಸಿ, ಪವರ್ ಗ್ರಿಡ್, ಇನ್ಫೊಸಿಸ್‌ ಮತ್ತು ರಿಲಯನ್ಸ್ ಇಂಡಸ್ಟ್ರೀಸ್‌ ಷೇರಿನ ಮೌಲ್ಯವು ಇಳಿಕೆ ಕಂಡಿದೆ. 

ಜಾಗತಿಕ ಮಾರುಕಟ್ಟೆಯಲ್ಲಿ ಬ್ರೆಂಟ್‌ ಕಚ್ಚಾ ತೈಲ ದರವು ಶೇ 1.08ರಷ್ಟು ಇಳಿಕೆಯಾಗಿದೆ. ಪ್ರತೀ ಬ್ಯಾರೆಲ್ ದರವು 66.87 ಡಾಲರ್ ಆಗಿದೆ.

Highlights - null

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.