ADVERTISEMENT

ಆರಂಭಿಕ ವಹಿವಾಟಿನಲ್ಲಿ ಏರಿಕೆ ದಾಖಲಿಸಿದ ಸೆನ್ಸೆಕ್ಸ್, ನಿಫ್ಟಿ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2025, 6:19 IST
Last Updated 13 ಆಗಸ್ಟ್ 2025, 6:19 IST
<div class="paragraphs"><p>ಷೇರುಪೇಟೆ</p></div>

ಷೇರುಪೇಟೆ

   

(ಪಿಟಿಐ ಚಿತ್ರ)

ಮುಂಬೈ: ಷೇರುಪೇಟೆಯ ಆರಂಭಿಕ ವಹಿವಾಟಿನಲ್ಲಿ ದೇಶೀಯ ಷೇರು ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಏರಿಕೆ ಕಂಡಿವೆ. ಅಮೆರಿಕದ ಸ್ಥಿರ ಹಣದುಬ್ಬರ ದತ್ತಾಂಶವು ಮಾರುಕಟ್ಟೆ ಮೇಲೆ ಪರಿಣಾಮ ಬೀರಿದೆ.

ADVERTISEMENT

ಇದಲ್ಲದೆ, ಜುಲೈನಲ್ಲಿ ಭಾರತದ ಚಿಲ್ಲರೆ ಹಣದುಬ್ಬರವು 8 ವರ್ಷಗಳ ಕನಿಷ್ಠ ಮಟ್ಟವಾದ ಶೇ 1.55ಕ್ಕೆ ಇಳಿದಿದ್ದು, ದೇಶೀಯ ಷೇರುಪೇಟೆಯಲ್ಲಿ ಸಕಾರಾತ್ಮಕ ಪ್ರವೃತ್ತಿಗೆ ಕಾರಣವಾಗಿದೆ.

ಬಿಎಸ್‌ಇಯ 30 ಷೇರುಗಳ ಸೆನ್ಸೆಕ್ಸ್ ಆರಂಭಿಕ ವಹಿವಾಟಿನಲ್ಲಿ 327.79 ಅಂಕಗಳ ಏರಿಕೆಯಾಗಿ 80,563.38ರಲ್ಲಿ ವಹಿವಾಟು ಆರಂಭಿಸಿತ್ತು. 50 ಷೇರುಗಳ ಎನ್‌ಎಸ್‌ಇಯ ನಿಫ್ಟಿ 112.15 ಅಂಕಗಳಷ್ಟು ಏರಿಕೆಯಾಗಿ 24,599.55ರಲ್ಲಿ ವಹಿವಾಟು ಆರಂಭಿಸಿತ್ತು.

ಸೆನ್ಸೆಕ್ಸ್ ಸಂಸ್ಥೆಗಳ ಪೈಕಿ ಭಾರತ್ ಎಲೆಕ್ಟ್ರಾನಿಕ್ಸ್, ಟಾಟಾ ಮೋಟಾರ್ಸ್, ಪವರ್ ಗ್ರಿಡ್, ಟಾಟಾ ಸ್ಟೀಲ್, ಎಟರ್ನಲ್ ಮತ್ತು ಇನ್ಫೋಸಿಸ್ ಲಾಭ ಗಳಿಸಿದ್ದವು.

ಆದರೂ, ಮಾರುತಿ, ಟೆಕ್ ಮಹೀಂದ್ರ, ಎಚ್‌ಸಿಎಲ್ ಟೆಕ್ ಮತ್ತು ಬಜಾಜ್ ಫಿನ್‌ಸರ್ವ್ ಹಿನ್ನಡೆ ನಷ್ಟ ಕಂಡಿವೆ.

ಏಷ್ಯಾ ಪೇಟೆಗಳ ಪೈಕಿ ದಕ್ಷಿಣ ಕೊರಿಯಾದ ಕಾಸ್ಪಿ, ಜಪಾನ್‌ನ ನಿಕ್ಕಿ 225 ಸೂಚ್ಯಂಕ, ಶಾಂಘೈನ ಎಸ್‌ಎಸ್‌ಇ ಕಾಂಪೋಸಿಟ್ ಸೂಚ್ಯಂಕ ಮತ್ತು ಹಾಂಗ್ ಕಾಂಗ್‌ನ ಹ್ಯಾಂಗ್ ಸೆಂಗ್ ಏರಿಕೆಯೊಂದಿಗೆ ವಹಿವಾಟು ನಡೆಸುತ್ತಿವೆ.

ಮಂಗಳವಾರ ಅಮೆರಿಕ ಷೇರುಪೇಟೆಗಳು ಗಮನಾರ್ಹವಾಗಿ ಏರಿಕೆಯಾಗಿ ಕೊನೆಗೊಂಡಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.