ಮುಂಬೈ: ಸತತ ಎರಡನೇ ದಿನವಾದ ಬುಧವಾರದ ವಹಿವಾಟಿನಲ್ಲಿಯೂ ಷೇರು ಸೂಚ್ಯಂಕಗಳು ಇಳಿಕೆ ಕಂಡಿವೆ.
ಎಫ್‌ಎಂಸಿಜಿ ಮತ್ತು ಐಟಿಸಿ ಷೇರುಗಳ ಮೌಲ್ಯ ಇಳಿಕೆ ಕಂಡಿದ್ದರಿಂದ ಷೇರುಪೇಟೆಯಲ್ಲಿ ನಕಾರಾತ್ಮಕ ವಹಿವಾಟು ನಡೆದಿದೆ.
ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 239 ಅಂಶ ಇಳಿಕೆ ಕಂಡು, 81,312 ಅಂಶಗಳಲ್ಲಿ ಸ್ಥಿರಗೊಂಡಿತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 73 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿತು.
ಐಟಿಸಿ ಷೇರಿನ ಮೌಲ್ಯದಲ್ಲಿ ಶೇ 3ರಷ್ಟು ಇಳಿಕೆಯಾಗಿದೆ. ಇಂಡಸ್ ಇಂಡ್ ಬ್ಯಾಂಕ್, ನೆಸ್ಲೆ, ಅಲ್ಟ್ರಾಟೆಕ್ ಸಿಮೆಂಟ್, ಮಹೀಂದ್ರ ಆ್ಯಂಡ್ ಮಹೀಂದ್ರ, ಪವರ್ ಗ್ರಿಡ್, ಏಷ್ಯನ್ ಪೇಂಟ್ಸ್, ಸನ್ ಫಾರ್ಮಾ, ಟೆಕ್ ಮಹೀಂದ್ರ ಷೇರಿನ ಮೌಲ್ಯ ಇಳಿಕೆಯಾಗಿದೆ.
ಬಜಾಜ್ ಫೈನಾನ್ಸ್, ಭಾರ್ತಿ ಏರ್‌ಟೆಲ್, ಐಸಿಐಸಿಐ ಬ್ಯಾಂಕ್, ಅದಾನಿ ಪೋರ್ಟ್ಸ್, ಎಚ್‌ಸಿಎಲ್ ಟೆಕ್ ಷೇರಿನ ಮೌಲ್ಯ ಏರಿಕೆ ಕಂಡಿದೆ.
ಎಲ್‌ಐಸಿ ಷೇರಿನ ಮೌಲ್ಯ ಶೇ 8ರಷ್ಟು ಏರಿಕೆ: ಭಾರತೀಯ ಜೀವ ವಿಮಾ ನಿಗಮದ (ಎಲ್‌ಐಸಿ) ಷೇರಿನ ಮೌಲ್ಯದಲ್ಲಿ ಶೇ 8ರಷ್ಟು ಹೆಚ್ಚಳವಾಗಿದೆ. ಮಾರುಕಟ್ಟೆ ಬಂಡವಾಳ ಮೌಲ್ಯಕ್ಕೆ (ಎಂ–ಕ್ಯಾಪ್) ₹45,223 ಕೋಟಿ ಸೇರ್ಪಡೆಯಾಗಿದೆ. ಒಟ್ಟು ಎಂ–ಕ್ಯಾಪ್ ₹5.96 ಲಕ್ಷ ಕೋಟಿ ಆಗಿದೆ.
2024–25ನೇ ಆರ್ಥಿಕ ವರ್ಷದ ಮಾರ್ಚ್ ತ್ರೈಮಾಸಿಕದಲ್ಲಿ ಎಲ್‌ಐಸಿ ನಿವ್ವಳ ಲಾಭದಲ್ಲಿ ಶೇ 38ರಷ್ಟು ಹೆಚ್ಚಳವಾಗಿದೆ. ಇದು ಷೇರಿನ ಮೌಲ್ಯ ಹೆಚ್ಚಳಕ್ಕೆ ನೆರವಾಗಿದೆ ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.