ADVERTISEMENT

H–1B ವೀಸಾ ಶುಲ್ಕ ಹೆಚ್ಚಳ ಪರಿಣಾಮ: ಆರಂಭಿಕ ವಹಿವಾಟಿನಲ್ಲಿ ಸೂಚ್ಯಂಕ ಇಳಿಕೆ

ಪಿಟಿಐ
Published 24 ಸೆಪ್ಟೆಂಬರ್ 2025, 4:54 IST
Last Updated 24 ಸೆಪ್ಟೆಂಬರ್ 2025, 4:54 IST
   

ಮುಂಬೈ: ಅಮೆರಿಕದ ಎಚ್‌–1ಬಿ ವೀಸಾ ಶುಲ್ಕ ಹೆಚ್ಚಳದ ನಿರ್ಧಾರದ ಪರಿಣಾಮವಾಗಿ ದೇಶದ ಮಾಹಿತಿ ತಂತ್ರಜ್ಞಾನ ವಲಯದ ಕಂಪನಿಗಳ ಷೇರಿನ ಮೌಲ್ಯವು ಇಳಿದಿದೆ. ಹೀಗಾಗಿ, ಬುಧವಾರ ನಡೆದ ಆರಂಭಿಕ ವಹಿವಾಟಿನಲ್ಲಿ ಷೇರುಪೇಟೆ ಸೂಚ್ಯಂಕಗಳು ಇಳಿಕೆ ಕಂಡಿವೆ.

ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 380 ಅಂಶ ಇಳಿಕೆಯಾಗಿ, 81,721ಕ್ಕೆ ತಲುಪಿತ್ತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 106 ಅಂಶ ಕಡಿಮೆಯಾಗಿ, 25,063ಕ್ಕೆ ತಲುಪಿತ್ತು.

ಸೆನ್ಸೆಕ್ಸ್ ಸಂಸ್ಥೆಗಳಾದ ಟೆಕ್ ಮಹೀಂದ್ರಾ, ಟಾಟಾ ಮೋಟಾರ್ಸ್, ಐಸಿಐಸಿಐ ಬ್ಯಾಂಕ್, ಭಾರ್ತಿ ಏರ್‌ಟೆಲ್, ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್, ಎಕ್ಸಿಸ್ ಬ್ಯಾಂಕ್, ಟೈಟಾನ್ ಮತ್ತು ಕೋಟಕ್ ಮಹೀಂದ್ರಾ ಬ್ಯಾಂಕ್ ಕುಸಿತ ಕಂಡಿವೆ.

ADVERTISEMENT

ಆದಾಗ್ಯೂ, ಟ್ರೆಂಟ್, ಎನ್‌ಟಿಪಿಸಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಏಷ್ಯನ್ ಪೇಂಟ್ಸ್ ಲಾಭ ಗಳಿಸಿವೆ.

ಜಾಗತಿಕ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲ ದರವು ಶೇ 0.28ರಷ್ಟು ಏರಿಕೆಯಾಗಿದೆ. ಪ್ರತೀ ಬ್ಯಾರೆಲ್ ದರವು 67.82 ಡಾಲರ್ ಆಗಿದೆ.

ರೂಪಾಯಿ ಮೌಲ್ಯ ಇಳಿಕೆ

ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಬುಧವಾರ ಆರಂಭಿಕ ವಹಿವಾಟಿನಲ್ಲಿ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯವು 7 ಪೈಸೆ ಇಳಿಕೆಯಾಗಿದೆ. ರೂಪಾಯಿ ಮೌಲ್ಯವು ಡಾಲರ್ ಎದುರು ₹88.80ರಷ್ಟಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.