ADVERTISEMENT

ಷೇರುಪೇಟೆ: ಸೆನ್ಸೆಕ್ಸ್, ನಿಫ್ಟಿ ಇಳಿಕೆ

ಪಿಟಿಐ
Published 27 ಮೇ 2025, 14:37 IST
Last Updated 27 ಮೇ 2025, 14:37 IST
ಷೇರುಪೇಟೆ
ಷೇರುಪೇಟೆ   

ಮುಂಬೈ: ದೇಶದ ಷೇರುಪೇಟೆ ಸೂಚ್ಯಂಕಗಳು ಮಂಗಳವಾರದ ವಹಿವಾಟಿನಲ್ಲಿ ಶೇ 1ರಷ್ಟು ಇಳಿಕೆಯಾಗಿವೆ. 

ಲಾಭ ಗಳಿಕೆಯ ಉದ್ದೇಶದಿಂದ ಹೂಡಿಕೆದಾರರು ಬ್ಯಾಂಕಿಂಗ್‌, ಐ.ಟಿ ಮತ್ತು ಆಟೊ ಷೇರುಗಳ ಮಾರಾಟಕ್ಕೆ ಮುಂದಾದರು. ಇದು ಸೂಚ್ಯಂಕಗಳ ಇಳಿಕೆ ಕಂಡಿವೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.

ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 624 ಅಂಶ ಇಳಿಕೆಯಾಗಿ, 81,551ಕ್ಕೆ ವಹಿವಾಟು ಅಂತ್ಯಗೊಂಡಿತು. ವಹಿವಾಟಿನ ವೇಳೆ 1,054 ಅಂಶ ಕುಸಿದಿತ್ತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 174 ಅಂಶ ಕಡಿಮೆಯಾಗಿ, 24,826 ಆಗಿದೆ. 

ADVERTISEMENT

ಅಲ್ಟ್ರಾಟೆಕ್‌ ಸಿಮೆಂಟ್‌, ಐಟಸಿ, ಟಾಟಾ ಮೋಟರ್ಸ್, ಎನ್‌ಟಿಪಿಸಿ, ಎಕ್ಸಿಸ್‌ ಬ್ಯಾಂಕ್‌, ಎಚ್‌ಸಿಎಲ್‌ ಟೆಕ್‌, ಮಹೀಂದ್ರ ಆ್ಯಂಡ್‌ ಮಹೀಂದ್ರ, ಎಚ್‌ಡಿಎಫ್‌ಸಿ ಬ್ಯಾಂಕ್‌, ಐಸಿಐಸಿಐ ಬ್ಯಾಂಕ್‌ ಮತ್ತು ಎಟರ್ನಲ್‌ ಷೇರಿನ ಮೌಲ್ಯದಲ್ಲಿ ಇಳಿಕೆಯಾಗಿದೆ. ಇಂಡಸ್‌ಇಂಡ್‌ ಬ್ಯಾಂಕ್‌, ಸನ್‌ಫಾರ್ಮಾ, ಅದಾನಿ ಪೋರ್ಟ್ಸ್, ನೆಸ್ಲೆ ಮತ್ತು ಏಷ್ಯನ್‌ ಪೇಂಟ್ಸ್‌ ಷೇರಿನ ಮೌಲ್ಯ ಏರಿಕೆಯಾಗಿದೆ.

ದಕ್ಷಿಣ ಕೊರಿಯಾ ಮತ್ತು ಶಾಂಘೈ ಮಾರುಕಟ್ಟೆ ಇಳಿಕೆ ಕಂಡಿದ್ದರೆ, ಜಪಾನ್ ಮತ್ತು ಹಾಂಗ್‌ಕಾಂಗ್‌ ಮಾರುಕಟ್ಟೆಯು ಏರಿಕೆ ಕಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.