ADVERTISEMENT

ಬಿದ್ದು, ಎದ್ದ ಷೇರುಪೇಟೆ ಸೂಚ್ಯಂಕ

ಪಿಟಿಐ
Published 7 ಆಗಸ್ಟ್ 2025, 16:01 IST
Last Updated 7 ಆಗಸ್ಟ್ 2025, 16:01 IST
ಷೇರುಪೇಟೆ
ಷೇರುಪೇಟೆ   

ಮುಂಬೈ: ಗುರುವಾರದ ಆರಂಭಿಕ ವಹಿವಾಟಿನಲ್ಲಿ ಇಳಿಕೆ ಕಂಡಿದ್ದ ದೇಶದ ಷೇರುಪೇಟೆ ಸೂಚ್ಯಂಕಗಳು ವಹಿವಾಟಿನ ಕೊನೆಯ ಹೊತ್ತಿಗೆ ಪುಟಿದೆದ್ದವು. ಹೂಡಿಕೆದಾರರು ಐ.ಟಿ ಮತ್ತು ಬ್ಯಾಂಕಿಂಗ್ ವಲಯದ ಷೇರುಗಳನ್ನು ಹೆಚ್ಚಾಗಿ ಖರೀದಿಸಿದರು.

ಅಮೆರಿಕವು ಭಾರತದ ಸರಕುಗಳ ಮೇಲೆ ಹೆಚ್ಚುವರಿಯಾಗಿ ಶೇ 25ರಷ್ಟು ಸುಂಕ ವಿಧಿಸುವುದಾಗಿ ಬುಧವಾರ ಪ್ರಕಟಿಸಿದ್ದು ಹೂಡಿಕೆದಾರರ ಮೇಲೆ ಪರಿಣಾಮ ಬೀರಿದ್ದರಿಂದ ಸೂಚ್ಯಂಕಗಳು ಬೆಳಿಗ್ಗೆ ಇಳಿಕೆ ಕಂಡಿದ್ದವು. 

ಆದರೆ, ಅಮರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ರಷ್ಯಾದ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್ ಮತ್ತು ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್‌ಸ್ಕಿ ನಡುವೆ ಶಾಂತಿ ಮಾತುಕತೆ ನಡೆಯುವ ಸಾಧ್ಯತೆ ಇದೆ ಎಂಬ ವರದಿಗಳು ಬಂದ ಹೇಳಿದ ಬಳಿಕ ಸೂಚ್ಯಂಕಗಳು ಏರಿಕೆ ಕಂಡವು ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.

ADVERTISEMENT

‘ವಾಹನಗಳು, ಔಷಧಗಳು, ಲೋಹ ಮತ್ತು ಇಂಧನ ವಲಯದ ಕಂಪನಿಗಳ ಷೇರುಗಳ ಖರೀದಿ ಹೆಚ್ಚಳ ಸಹ ಸೂಚ್ಯಂಕಗಳ ಏರಿಕೆಗೆ ನೆರವಾದವು’ ಎಂದು ಜಿಯೊಜಿತ್ ಇನ್ವೆಸ್ಟ್‌ಮೆಂಟ್‌ನ ಸಂಶೋಧನಾ ಮುಖ್ಯಸ್ಥ ವಿನೋದ್ ನಾಯರ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.