ADVERTISEMENT

ಟಿವಿಎಸ್‌ ಷೇರಿನ ಬೆಲೆ ₹4,159ಕ್ಕೆ ತಲುಪಲಿದೆ: ಮೋತಿಲಾಲ್ ಓಸ್ವಾಲ್

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2025, 16:17 IST
Last Updated 29 ಅಕ್ಟೋಬರ್ 2025, 16:17 IST
   

ವಾಹನ ತಯಾರಕ ಕಂಪನಿ ಟಿವಿಎಸ್‌ ಮೋಟರ್‌ನ ಷೇರಿನ ಬೆಲೆ ₹4,159ಕ್ಕೆ ತಲುಪಲಿದೆ ಎಂದು ಬ್ರೋಕರೇಜ್ ಕಂಪನಿ ಮೋತಿಲಾಲ್ ಓಸ್ವಾಲ್ ಫೈನಾನ್ಶಿಯಲ್ ಸರ್ವಿಸಸ್‌ ಹೇಳಿದೆ.

ಪ್ರಸಕ್ತ ಆರ್ಥಿಕ ವರ್ಷದ ಸೆಪ್ಟೆಂಬರ್‌ ತ್ರೈಮಾಸಿಕದಲ್ಲಿ ಕಂಪನಿಯ 15 ಲಕ್ಷ ವಾಹನಗಳು ಮಾರಾಟವಾಗಿವೆ. ಕಳೆದ ಆರ್ಥಿಕ ವರ್ಷದ ಇದೇ ಅವಧಿಗೆ ಹೋಲಿಸಿದರೆ ಮಾರಾಟದಲ್ಲಿ ಶೇ 22ರಷ್ಟು ಹೆಚ್ಚಳವಾಗಿದೆ. ಜಿಎಸ್‌ಟಿ ದರ ಕಡಿತವಾಗಿದ್ದು, ಪ್ರಸಕ್ತ ಆರ್ಥಿಕ ವರ್ಷದ ದ್ವಿತೀಯಾರ್ಧದಲ್ಲೂ ದ್ವಿಚಕ್ರ ವಾಹನಗಳಿಗೆ ಬೇಡಿಕೆ ಉತ್ತಮ ಮಟ್ಟದಲ್ಲಿ ಇರುವ ನಿರೀಕ್ಷೆ ಇದೆ ಎಂದು ಕಂಪನಿ ಅಂದಾಜಿಸಿದೆ.

ಹಬ್ಬದ ಋತುವಿನಲ್ಲಿ ವಾಹನಗಳ ರಿಟೇಲ್ ಮಾರಾಟ ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ 32ರಷ್ಟು ಹೆಚ್ಚಳವಾಗಿದೆ. ರಫ್ತು ಶೇ 31ರಷ್ಟು ಹೆಚ್ಚಳವಾಗಿದ್ದು, ಆಫ್ರಿಕಾ ಮತ್ತು ಲ್ಯಾಟಿನ್ ಅಮೆರಿಕದಲ್ಲಿ ಮಾರುಕಟ್ಟೆ ಪಾಲು ಹೆಚ್ಚಾಗಿದೆ. ದೇಶಿ ಮಾರುಕಟ್ಟೆಯಲ್ಲಿ ದ್ವಿಚಕ್ರ ವಾಹನಗಳು ಮತ್ತು ವಿದ್ಯುತ್‌ ಚಾಲಿತ ವಾಹನಗಳ ಮಾರಾಟದಲ್ಲಿ ಸುಧಾರಣೆ ಕಂಡಿದೆ ಎಂದು ತಿಳಿಸಿದೆ. 2024–25ರ ಆರ್ಥಿಕ ವರ್ಷದಿಂದ 2027–28ರವರೆಗೆ ವರಮಾನ ವೃದ್ಧಿ (ಸಿಎಜಿಆರ್‌) ಶೇ 21ರಷ್ಟು ಇರುವ ನಿರೀಕ್ಷೆ ಎಂದು ಮೋತಿಲಾಲ್ ಓಸ್ವಾಲ್‌ ಅಂದಾಜಿಸಿದೆ.

ADVERTISEMENT

ಬುಧವಾರದ ವಹಿವಾಟಿನ ಅಂತ್ಯದ ವೇಳೆಗೆ ಕಂಪನಿಯ ಷೇರಿನ ಮೌಲ್ಯ ₹3,501.20 ಇತ್ತು.

(ಬ್ರೋಕರೇಜ್ ಕಂಪನಿಗಳು ನೀಡುವ ವಿವರ, ಮಾಹಿತಿಗೆ ಪತ್ರಿಕೆ ಹೊಣೆಯಲ್ಲ)

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.