ನಾಡಹಬ್ಬ ಮೈಸೂರು ದಸರಾ ಉತ್ಸವಕ್ಕೆ ಸೋಮವಾರ ಅದ್ಧೂರಿ ಚಾಲನೆ ಸಿಕ್ಕಿತು. ಅಂತರರಾಷ್ಟ್ರೀಯ ಬೂಕರ್ ಸಾಹಿತ್ಯ ಪ್ರಶಸ್ತಿ ಪುರಸ್ಕೃತರಾದ ಲೇಖಕಿ ಬಾನು ಮುಷ್ತಾಕ್ ಉದ್ಘಾಟಿಸಿದರು. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಾಡದೇವಿ ಚಾಮುಂಡೇಶ್ವರಿ ಮೂರ್ತಿಗೆ ದೀಪ ಬೆಳಗಿ, ಪುಷ್ಪಾರ್ಚನೆ ಮಾಡುವ ಮೂಲಕ ದಸರಾ ಉತ್ಸವಕ್ಕೆ ಬಾನು ಮುಷ್ತಾಕ್ ಚಾಲನೆ ನೀಡಿದರು. ನವರಾತ್ರಿ ಆಚರಣೆಯ ಮೊದಲ ದಿನದ ಬಣ್ಣವಾದ ಹಳದಿ ಸೀರೆಯನ್ನು ಉಟ್ಟಿದ್ದ ಬಾನು ಮುಷ್ತಾಕ್ ತಮ್ಮ ಪ್ರತಿ ಮಾತಿನಲ್ಲೂ ಸಾಮರಸ್ಯ ಸಂದೇಶ ಸಾರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.