ADVERTISEMENT

ದಿನದ ಸೂಕ್ತಿ: ಶಕ್ತಿಯ ಆರಾಧನೆ

ಎಸ್.ಸೂರ್ಯಪ್ರಕಾಶ ಪಂಡಿತ್
Published 10 ಅಕ್ಟೋಬರ್ 2021, 2:13 IST
Last Updated 10 ಅಕ್ಟೋಬರ್ 2021, 2:13 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಯಾ ದೇವಿ ಸರ್ವಭೂತೇಷು ಬುಧ್ಧಿರೂಪೇಣ ಸಂಸ್ಥಿತಾ ।
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ।।
ಯಾ ದೇವಿ ಸರ್ವಭೂತೇಷು ನಿದ್ರಾರೂಪೇಣ ಸಂಸ್ಥಿತಾ ।
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ।।
ಯಾ ದೇವಿ ಸರ್ವಭೂತೇಷು ಕ್ಷುಧಾರೂಪೇಣ ಸಂಸ್ಥಿತಾ ।
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ।।
ಯಾ ದೇವಿ ಸರ್ವಭೂತೇಷು ಛಾಯರೂಪೇಣ ಸಂಸ್ಥಿತಾ ।
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ।।
ಯಾ ದೇವೀ ಸರ್ವಭೂತೇಷು ಶಕ್ತಿರೂಪೇಣ ಸಂಸ್ಥಿತಾ ।
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ।।
ಯಾ ದೇವಿ ಸರ್ವಭೂತೇಷು ತೃಷ್ಣಾರೂಪೇಣ ಸಂಸ್ಥಿತಾ ।
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ।।
ಯಾ ದೇವೀ ಸರ್ವಭೂತೇಷು ಶಾಂತಿರೂಪೇಣ ಸಂಸ್ಥಿತಾ ।
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ।।
ಯಾ ದೇವಿ ಸರ್ವಭೂತೇಷು ಲಜ್ಜಾರೂಪೇಣ ಸಂಸ್ಥಿತಾ ।
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ।।
ಯಾ ದೇವೀ ಸರ್ವಭೂತೇಷು ಶ್ರದ್ಧಾರೂಪೇಣ ಸಂಸ್ಥಿತಾ ।।
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ
ಯಾ ದೇವೀ ಸರ್ವಭೂತೇಷು ಕಾಂತಿರೂಪೇಣ ಸಂಸ್ಥಿತಾ ।
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ।।
ಯಾವ ದೇವೀ ಸರ್ವಭೂತೇಷು ಲಕ್ಷ್ಮೀರೂಪೇಣ ಸಂಸ್ಥಿತಾ ।
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ।।
ಯಾ ದೇವಿ ಸರ್ವಭೂತೇಷು ದಯಾರೂಪೇಣ ಸಂಸ್ಥಿತಾ ।
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ।।
ಯಾ ದೇವಿ ಸರ್ವಭೂತೇಷು ತುಷ್ಟಿರೂಪೇಣ ಸಂಸ್ಥಿತಾ ।
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ।।
ಯಾ ದೇವಿ ಸರ್ವಭೂತೇಷು ಮಾತೃರೂಪೇಣ ಸಂಸ್ಥಿತಾ ।
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ।।

ಇದೀಗ ನವರಾತ್ರಿಯ ಆಚರಣೆ ನಡೆಯುತ್ತಿದೆ. ನವರಾತ್ರಿ ಎಂದರೆ ಶಕ್ತಿಯ ಆರಾಧನೆ. ಜಗನ್ಮಾತೆಯನ್ನು ಶಕ್ತಿಯ ವಿವಿಧ ಸ್ವರೂಪಗಳಲ್ಲಿ ಆರಾಧಿಸುವುದು ವಾಡಿಕೆ. ಈ ಶ್ಲೋಕಗಳು ದುರ್ಗಾಸಪ್ತಶತಿಯಲ್ಲಿ ಬರುವಂಥದ್ದು. ದೇವಿಯ ವಿವಿಧ ರೂಪಗಳನ್ನು ಇಲ್ಲಿ ಹೇಳಲಾಗಿದೆ. ಯಾವ ದೇವಿಯು ಸಕಲ ಪ್ರಾಣಿಗಳಲ್ಲಿಯೂ ಬುದ್ಧಿ, ನಿದ್ರಾ, ಹಸಿವು, ನೆರಳು, ಶಕ್ತಿ, ಬಾಯಾರಿಕೆ, ಶಾಂತಿ, ನಾಚಿಕೆ, ಶ್ರದ್ಧೆ, ಕಾಂತಿ, ಸಂಪತ್ತು, ದಯೆ, ತೃಪ್ತಿ, ತಾಯಿ – ಈ ರೂಪಗಳಲ್ಲಿ ನೆಲೆಸಿದ್ದಾಳೋ ಅವಳನ್ನು ಮತ್ತೆ ಮತ್ತೆ ನಮಸ್ಕರಿಸುತ್ತೇನೆ ಎಂಬುದು ಇವುಗಳ ಭಾವ.

ಇವೆಲ್ಲವೂ ನಮ್ಮ ಜೀವನದಲ್ಲಿ ಬೇಕಾಗಿರುವ ಶಕ್ತಿಗಳೇ ಹೌದು. ಇವು ನಮ್ಮಲ್ಲಿಯೇ ಇವೆ. ಇವುಗಳನ್ನು ಎಚ್ಚರಿಸುವ ಸಂಕಲ್ಪವನ್ನೂ ಬುದ್ಧಿಯನ್ನೂ ನೀಡು ಎಂದು ದೇವಿಯನ್ನು ಪ್ರಾರ್ಥಿಸಿಕೊಳ್ಳೋಣ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.