ADVERTISEMENT

'ಈದ್‌ ಮಿಲಾದ್' ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 30 ಅಕ್ಟೋಬರ್ 2020, 4:01 IST
Last Updated 30 ಅಕ್ಟೋಬರ್ 2020, 4:01 IST
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ   

ಬೆಂಗಳೂರು: ಇಂದು 'ಈದ್‌ ಮಿಲಾದ್'. ಪ್ರವಾದಿ ಮಹಮ್ಮದ್‌ ಅವರ ಜನ್ಮದಿನದವನ್ನು ಈ ದಿನ ಆಚರಿಸಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದೇಶದ ವಿವಿಧ ಗಣ್ಯರು ಹಬ್ಬದ ಶುಭಾಶಯ ಕೋರಿದ್ದಾರೆ.

ಇಸ್ಲಾಮಿಕ್‌ ಕ್ಯಾಲೆಂಡರಿನ ಮೂರನೇ ತಿಂಗಳು ರಬೀವುಲ್‌ ಅವ್ವಲ್. ಪ್ರವಾದಿ ಅವರು ರಬೀವುಲ್‌ ಅವ್ವಲ್ ತಿಂಗಳ 12ರಂದು ಸೌದಿ ಅರೇಬಿಯಾದ ಮೆಕ್ಕಾದಲ್ಲಿ ಜನಿಸಿದರು. ಅವರ ಜನ್ಮದಿನದ ಅಂಗವಾಗಿ ಹಲವು ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ ಹಾಗೂ ಅವರ ಜೀವನಚರಿತ್ರೆ ಮತ್ತು ಸಂದೇಶಗಳನ್ನು ನೆನಪಿಸಲಾಗುತ್ತದೆ.

'ಮಿಲಾದ್‌–ಉನ್–ನಬಿ ದಿನದ ಶುಭಾಶಯಗಳು. ಈ ದಿನವು ಕರುಣೆ ಮತ್ತು ಸೋದರತ್ವವನ್ನು ಮತ್ತಷ್ಟು ವಿಸ್ತರಿಸಲಿ. ಎಲ್ಲರೂ ಆರೋಗ್ಯದಿಂದ ಮತ್ತು ಖುಷಿಯಿಂದ ಇರಲಿ. ಈದ್‌ ಮುಬಾರಕ್‌!' ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟಿಸಿದ್ದಾರೆ.

ADVERTISEMENT

ಪ್ರವಾದಿ ಮಹಮ್ಮದ್ ಹುಟ್ಟಿದ ದಿನ ಆಚರಣೆಯ ಶುಭಾಶಯಗಳನ್ನು ತಿಳಿಸಿರುವ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌, 'ಎಲ್ಲ ನಾಗರಿಕರಿಗೆ, ವಿಶೇಷವಾಗಿ ಭಾರತದ ಮತ್ತು ಹೊರ ರಾಷ್ಟ್ರಗಳಲ್ಲಿರುವ ನಮ್ಮ ಮುಸ್ಲಿಂ ಸೋದರ ಮತ್ತು ಸೋದರಿಯರಿಗೆ ಶುಭಾಶಯಗಳು. ಸಮಾಜದ ಒಳಿತಿಗಾಗಿ, ದೇಶದಲ್ಲಿ ಶಾಂತಿ ಮತ್ತು ಸೌಹಾರ್ದತೆಗಾಗಿ ನಾವೆಲ್ಲರೂ ಅವರ ಬೋಧನೆಗಳನ್ನು ಅನುಸರಿಸೋಣ' ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.