ADVERTISEMENT

ಅಡಿಕೆ ಬೆಳೆಗಾರರಿಗೆ ಪ್ಯಾಕೇಜ್

​ಪ್ರಜಾವಾಣಿ ವಾರ್ತೆ
Published 16 ಜನವರಿ 2012, 19:30 IST
Last Updated 16 ಜನವರಿ 2012, 19:30 IST

ತೀರ್ಥಹಳ್ಳಿ: ಸಂಕಷ್ಟಕ್ಕೆ ಸಿಲುಕಿರುವ ಮಲೆನಾಡಿನ ಅಡಿಕೆ ಬೆಳೆಗಾರರಿಗೆ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ನೀಡಲು ತೀರ್ಮಾನಿಸಿದೆ ಎಂದು ಮುಖ್ಯ ಮಂತ್ರಿ ಡಿ.ವಿ. ಸದಾನಂದಗೌಡ ಹೇಳಿದರು.

ತೀರ್ಥಹಳ್ಳಿ ತಾಲ್ಲೂಕು ಒಕ್ಕಲಿಗರ ಸಂಘ ಸೋಮವಾರ ಏರ್ಪಡಿಸಿದ್ದ ಸಹ್ಯಾದ್ರಿ ಕೇಂದ್ರೀಯ ಮಾದರಿ ವಿದ್ಯಾಶಾಲೆಯ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.

 ಎರಡು ವರ್ಷಗಳಿಂದ ಬೆಳೆಗಾರರ ಪರ ಹೋರಾಟ ನಡೆಸಲಾಗಿದೆ. ಪ್ರತಿ ಹೆಕ್ಟೇರ್‌ಗೆ ರೂ 15 ಸಾವಿರ ನೀಡಲು ನಿರ್ಧರಿಸಲಾಗಿದೆ. ಜತೆಗೆ, ಸಾಲ, ಬಡ್ಡಿ ಮನ್ನಾ ಕುರಿತು ಚಿಂತಿಸಲಾಗುತ್ತಿದೆ.  ಗೋರಕ್‌ಸಿಂಗ್ ವರದಿ ಜಾರಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ. ಬೆಲೆ ಕುಸಿತಕ್ಕೆ ವಿದೇಶಗಳಿಂದ ಆಮದಾಗುವ ಅಡಿಕೆ ಕಾರಣವಾಗಿದ್ದು ಅದನ್ನು  ನಿಷೇಧಿಸಬೇಕಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.