ADVERTISEMENT

ಅಣ್ಣಾ ಹಜಾರೆ ಹೋರಾಟಕ್ಕೆ ಬೆಂಬಲ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2011, 19:30 IST
Last Updated 8 ಏಪ್ರಿಲ್ 2011, 19:30 IST
ಅಣ್ಣಾ ಹಜಾರೆ ಹೋರಾಟಕ್ಕೆ ಬೆಂಬಲ
ಅಣ್ಣಾ ಹಜಾರೆ ಹೋರಾಟಕ್ಕೆ ಬೆಂಬಲ   

ಬಳ್ಳಾರಿ: ಭ್ರಷ್ಟಾಚಾರ ವಿರೋಧಿಸಿ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರು ನಡೆಸುತ್ತಿರುವ ಆಮರಣ ಅನ್ನಸತ್ಯಾಗ್ರಹಕ್ಕೆ ನಗರದಲ್ಲಿ ಶುಕ್ರವಾರ ವಿವಿಧ ಸಂಘಟನೆಗಳು ತಮ್ಮ ಬೆಂಬಲ ಸೂಚಿಸಿದವು.

ಮೇಡಂ ಕ್ಯೂರಿ ಅಕಾಡೆಮಿ, ಅಖಿಲ ಭಾರತ ಹಜರತ್ ಟಿಪ್ಪು ಸುಲ್ತಾನ್ ಫೆಡರೇಷನ್, ಜಿಲ್ಲಾ ವಕೀಲರ ಸಂಘ, ಎಬಿವಿಪಿ, ನವಕರ್ನಾಟಕ ಯುವಶಕ್ತಿ ಸಂಘಟನೆ, ಭಾರತೀಯ ವೈದ್ಯಕೀಯ ಸಂಸ್ಥೆ, ದಲಿತ ಸಂಘರ್ಷ ಸಮಿತಿ, ಜಿಲ್ಲಾ ಅಂಗವಿಕಲರ ಸಂಘ, ಕನ್ನಡ ಸಾಹಿತ್ಯ ಪರಿಷತ್, ಕುವೆಂಪು ಅಭಿಮಾನಿಗಳ ಸಂಘ, ನಾಗರಿಕ ಹೋರಾಟ ಸಮಿತಿ ಸೇರಿದಂತೆ ಅನೇಕ ಸಂಘಟನೆಗಳ ಸದಸ್ಯರು ಪ್ರಮುಖ ಬೀದಿಗಳಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ರ್ಯಾಲಿ ನಡೆಸಿ ಭ್ರಷ್ಟಾಚಾರ ಹೊಡೆದೋಡಿಸಲು ಅಗತ್ಯವಾಗಿರುವ ಲೋಕಪಾಲ್ ಮಸೂದೆಯನ್ನು ಅಂಗೀಕರಿಸುವಂತೆ ಕೋರಿದರು.
 
ಜಿಲ್ಲಾ ನ್ಯಾಯಾಲಯದಿಂದ ಮೆರವಣಿಗೆ ನಡೆಸಿದ ವಕೀಲರ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ, ಸಚಿವ ಕರುಣಾಕರ ರೆಡ್ಡಿ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಅಹವಾಲು ಸ್ವೀಕಾರ ಸಭೆಗೆ ಅಡ್ಡಿಪಡಿಸಲು ಯತ್ನಿಸಿದರು.ಆಗ ಪ್ರತಿಭಟನಾಕಾರರತ್ತ ತೆರಳಿದ ಜಿಲ್ಲಾಧಿಕಾರಿ ಎ.ಎ. ಬಿಸ್ವಾಸ್ ಮನವಿ ಸ್ವೀಕರಿಸಿದರು. ಅಣ್ಣಾ ಹಜಾರೆ ಅವರ ಹೋರಾಟ ಬೆಂಬಲಿಸಿ ಸರದಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಮೇಡಂ ಕ್ಯೂರಿ ಅಕಾಡೆಮಿಯ ಎಸ್.ಮಂಜುನಾಥ ಹಾಗೂ ಇತರರಿಗೆ ರಂಗಭೂಮಿಯ ಹಿರಿಯ ಕಲಾವಿದ ಬೆಳಗಲ್ ವೀರಣ್ಣ ರಾಷ್ಟ್ರಧ್ವಜ ನೀಡಿ ಶುಭ ಕೋರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.