ADVERTISEMENT

ಅದ್ಧೂರಿ ಕರಗ ಮಹೋತ್ಸವ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2011, 19:30 IST
Last Updated 20 ಮಾರ್ಚ್ 2011, 19:30 IST

ವಿಜಯಪುರ: ಸಮೀಪದ ಬೂದಿಗೆರೆ ಗ್ರಾಮದ ಧರ್ಮರಾಯಸ್ವಾಮಿ ದೇವಾಲಯದಲ್ಲಿ ಕರಗಮಹೋತ್ಸವ ಕಾರ್ಯಕ್ರಮಗಳು ಶನಿವಾರ ಅದ್ಧೂರಿಯಾಗಿ ಜರುಗಿದವು.
ಧ್ವಜಾರೋಹಣ, ಹಸಿಕರಗ, ದೀಪಾರತಿ, ಹೂವಿನ ಕರಗ ಜರುಗಿತು.

ಬಸವಕಲ್ಯಾಣ ಮಠದ ಮಹದೇವ ಸ್ವಾಮೀಜಿ, ಸಾಯಿಸಂಸ್ಥಾನ ಪೀಠದ ಸಾಯಿಮಂಜುನಾಥ್ ಮಹಾರಾಜ್, ಶಾಸಕ ಕೆ.ವೆಂಕಟಸ್ವಾಮಿ, ಮಾಜಿ ಶಾಸಕ ಜಿ.ಚಂದ್ರಣ್ಣ, ಪುರಸಭೆ ಅಧ್ಯಕ್ಷೆ ಮಂಜುಳಾ ನಾರಾಯಣಸ್ವಾಮಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಶಿವಣ್ಣ, ಪುರಸಭಾ ಸದಸ್ಯರು, ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು, ಧರ್ಮರಾಯಸ್ವಾಮಿ ದೇವಾಲಯ ಸಮಿತಿ ಸದಸ್ಯರು, ವೀರಕುಮಾರರು, ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.