ADVERTISEMENT

ಅನಾಹುತಗಳಿಗೆ ತಕ್ಷಣ ಸ್ಪಂದಿಸಲು ಸೂಚನೆ

​ಪ್ರಜಾವಾಣಿ ವಾರ್ತೆ
Published 17 ಮೇ 2012, 19:30 IST
Last Updated 17 ಮೇ 2012, 19:30 IST

ವಿರಾಜಪೇಟೆ: ಕೊಡಗು ಜಿಲ್ಲೆಗೆ ಮುಂಗಾರು ಮಳೆ ಪ್ರವೇಶಿಸುವ ಮುನ್ಸೂಚನೆ ಇದ್ದು, ಅಧಿಕಾರಿಗಳೂ ತಕ್ಷಣವೇ ಸಂತ್ರಸ್ತರ ನೆರವಿಗೆ ಧಾವಿಸಬೇಕು ಎಂದು ಜ್ಲ್ಲಿಲಾ ಉಪವಿಭಾಗಾಧಿಕಾರಿ ಡಾ.ಎಂ.ಆರ್.ರವಿ ಸೂಚಿಸಿದರು.

ತಾಲ್ಲೂಕು ಆಡಳಿತ ವತಿಯಿಂದ ಪುರಭವನದಲ್ಲಿ ಗುರುವಾರ ಏರ್ಪಡಿಸಿದ್ದ ~ಪ್ರಕೃತಿ ವಿಕೋಪ ಮುನ್ನೆಚ್ಚರಿಕೆ ಹಾಗೂ ಪರಿಹಾರ~ ಕುರಿತ ಸಭೆಯ್ಲ್ಲಲಿ ಮಾತನಾಡಿ ತಾಲ್ಲೂಕಿನಲ್ಲಿ ಪ್ರಕೃತಿ ವಿಕೋಪ ಉಂಟಾದಲ್ಲಿ ಸಂತ್ರಸ್ತರಿಗೆ ತಕ್ಷಣ ಪರಿಹಾರ ಒದಗಿಸುವ ಮೂಲಕ ಸ್ಪಂದಿಸಬೇಕು ಎಂದು ಹೇಳಿದರು.

ಪ್ರಕೃತಿ ವಿಕೋಪದ ಸೂಕ್ಷ್ಮ ಕೇಂದ್ರಗಳ ಕುರಿತು 24 ಗಂಟೆಗಳೂ ನಿಗಾ ಇರಿಸಬೇಕು. ನದಿ ದಂಡೆಯಲ್ಲಿರುವ ಕುಟುಂಬಗಳನ್ನು ಪ್ರವಾಹ ಬರುವ ಮೊದಲೇ ಸ್ಥಳಾಂತರಿಸಬೇಕು. ಗೋಣಿಕೊಪ್ಪಲಿನ ಕೀರ್ತಿಹೊಳೆ, ಸಿದ್ದಾಪುರದ ಕರಡಿಗೋಡು ಗ್ರಾಮದ ಕಾವೇರಿ ನದಿ, ಗುಹ್ಯ ಹೊಳೆ, ಬಾಳೆಲೆ ನಿಟ್ಟೂರಿನ ಸೇತುವೆ, ಲಕ್ಷ್ಮಣ ತೀರ್ಥ ಹೊಳೆ, ಕೊಂಡಗೇರಿ ಗ್ಮಾರ ಕಾವೇರಿ ಹೊಳೆ ಪ್ರಕೃತಿ ವಿಕೋಪದ ಸೂಕ್ಷ್ಮ ಪ್ರದೇಶಗಳು ಎಂದು ಗುರುತಿಸಲಾಗಿದೆ ಎಂದು ತಿಳಿಸಿದರು.

ತಹಶೀಲ್ದಾರ್ ಹನುಮಂತಯ್ಯ, ತಾಲ್ಲೂಕಿನ ಸರ್ಕಲ್ ಇನ್ಸ್‌ಪೆಕ್ಟರ್‌ಗಳು, ಸಬ್ ಇನ್ಸ್‌ಪೆಕ್ಟರ್‌ಗಳು, ಅಬಕಾರಿ ಇಲಾಖೆ ಅಧಿಕಾರಿ, ಜಿಲ್ಲಾ ಪಂಚಾಯಿತಿ ಎಂಜಿನಿಯರ್, ಪಟ್ಟಣ ಪಂಚಾಯಿತಿ ಅಧಿಕಾರಿಗಳು, ರೆವಿನ್ಯೂ ಇನ್ಸ್‌ಪೆಕ್ಟರ್‌ಗಳು, ಗ್ರಾಮ ಲೆಕ್ಕಿಗರು, ಸಹಾಯಕರು, ರೆವಿನ್ಯೂ ಸಿಬ್ಬಂದಿ, ತಾಲ್ಲೂಕು ವೈದ್ಯಾಧಿಕಾರಿ, ಪಶು ವೈದ್ಯಾಧಿಕಾರಿ, ಸೆಸ್ಕ್, ಲೋಕೋಪಯೋಗಿ ಇಲಾಖೆ, ಶಿಕ್ಷಣ ಇಲಾಖೆ ಅಧಿಕಾರಿಗಳು ಸೇರಿ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.