ಬಸವಕಲ್ಯಾಣ: ಮಂಗಳವಾರ ಬೆಳಗಿನ ಜಾವ ಕಾರು ಅಪಘಾತದಲ್ಲಿ ಇಲ್ಲಿನ ಶಾಸಕ ಬಸವರಾಜ ಪಾಟೀಲ ಅಟ್ಟೂರ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅವರನ್ನು ಹೈದರಾಬಾದ್‌ನ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೈದರಾಬಾದ್ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಅವರು ಹೋಗುತ್ತಿದ್ದ ಕಾರು ಹೈದರಾಬಾದ್‌ನ ಪಟ್ಟಣಚೂರ್ ಭಾಗದ ಸೇತುವೆಗೆ ಡಿಕ್ಕಿ ಹೊಡೆಯಿತು. ಇದರಿಂದ ಅವರ ಕಣ್ಣಿಗೆ ಹಾಗೂ ತಲೆಗೆ ಪೆಟ್ಟಾಗಿದೆ. ಕಾರಿನ ಚಾಲಕ ಮತ್ತು ಗನ್‌ಮ್ಯಾನ್‌ಗೂ ಸಣ್ಣಪುಟ್ಟ ಗಾಯಗಳಾಗಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.