ADVERTISEMENT

ಅಪಘಾತ: ತಂದೆ, ಮಗ ಸಾವು

​ಪ್ರಜಾವಾಣಿ ವಾರ್ತೆ
Published 11 ಮಾರ್ಚ್ 2012, 19:30 IST
Last Updated 11 ಮಾರ್ಚ್ 2012, 19:30 IST

ತರೀಕೆರೆ: ಪಟ್ಟಣ ಹೊರವಲಯದಲ್ಲಿ ರಾಷ್ಟ್ರೀಯ ಹೆದ್ದಾರಿಯ ಹಿರೇಕಾತೂರು ಕ್ರಾಸ್ ಬಳಿ ಭಾನುವಾರ ಮಧ್ಯಾಹ್ನ ಬೈಕ್ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ ಬೈಕಿನಲ್ಲಿದ್ದ ತಂದೆ ಮತ್ತು ಮಗ ಮೃತಪಟ್ಟಿದ್ದಾರೆ.

ಮೃತರನ್ನು ಬೆಂಗಳೂರಿನ ಬಿಟಿಎಂ ಲೇಔಟ್ ನಿವಾಸಿಗಳಾದ ಗವಿರಂಗಪ್ಪ (65) ಮತ್ತು ವಾಸು (35) ಎಂದು ಗುರುತಿಸಲಾಗಿದೆ.

ಬೆಂಗಳೂರಿನಿಂದ ರೈಲಿನ ಮೂಲಕ ತರೀಕೆರೆಗೆ ಬಂದಿದ್ದ ಇವರಿಬ್ಬರು ಇಲ್ಲಿನ ಗಂಟೆಕಣಿವೆ ಗ್ರಾಮದಲ್ಲಿರುವ ತಮ್ಮ ತೋಟಕ್ಕೆ ಬೈಕಿನಲ್ಲಿ ತೆರಳುತ್ತಿದ್ದರು ಎನ್ನಲಾಗಿದೆ.

ಶಿವಮೊಗ್ಗದಿಂದ ತರೀಕೆರೆ ಕಡೆಗೆ ಬರುತ್ತಿದ್ದ ಲಾರಿ ಕಾರೊಂದನ್ನು ಹಿಂದಿಕ್ಕುವ ಸಮಯದಲ್ಲಿ ಅಪಘಾತ ನಡೆದಿದೆ. ಗವಿರಂಗಪ್ಪ ಸ್ಥಳದಲ್ಲಿ ಅಸು ನೀಗಿದ್ದು, ವಾಸು ಶಿವಮೊಗ್ಗ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.