ಯಲ್ಲಾಪುರ: ಟ್ಯಾಂಕರ್‌ಗೆ ಡಿಕ್ಕಿ ಹೊಡೆದು ಚಾಲಕನ ನಿಯಂತ್ರಣ ತಪ್ಪಿದ ಟಾಟಾ ಸುಮೋ ನಂತರ ಮರಕ್ಕೆ ಡಿಕ್ಕಿ ಹೊಡೆದು, ಸುಮೋದಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟು ಒಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳವಾರ ತಾಲ್ಲೂಕಿನ ಕಿರವತ್ತಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಮೃತಪಟ್ಟವರನ್ನು ಹುಬ್ಬಳ್ಳಿಯ ವಾಣಿಜ್ಯ ತೆರಿಗೆ ಇಲಾಖೆಯ ವಿಚಕ್ಷಕ ದಳದ ಸಹಾಯಕ ಆಯುಕ್ತ ಬಿ.ಎಲ್. ಹೊಸಮನಿ ಹಾಗೂ ಇದೇ ಕಚೇರಿಯ ಪ್ರಥಮ ದರ್ಜೆ ಗುಮಾಸ್ತ ಅರುಣ ಹೊಸಮನಿ ಎಂದು ಗುರುತಿಸಲಾಗಿದೆ. ಚಾಲಕ ರವಿ ಕರ್ಜಗಿ ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಾಣಿಜ್ಯ ತೆರಿಗೆ ಇಲಾಖೆಯ ಗುಪ್ತ ವಾರ್ತಾ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಇವರು ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಿ ವಾಪಸ್ ಹುಬ್ಬಳ್ಳಿಗೆ ಬರುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಪಿ.ಐ. ಗೋಪಾಲಕೃಷ್ಣ ನಾಯಕ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.