ADVERTISEMENT

ಅಸ್ವಸ್ಥ ಚಿರತೆ ಮರಿ ರಕ್ಷಣೆ

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2012, 19:30 IST
Last Updated 9 ಮಾರ್ಚ್ 2012, 19:30 IST
ಅಸ್ವಸ್ಥ ಚಿರತೆ ಮರಿ ರಕ್ಷಣೆ
ಅಸ್ವಸ್ಥ ಚಿರತೆ ಮರಿ ರಕ್ಷಣೆ   

ಮಾಗಡಿ: ತಾಲ್ಲೂಕಿನ ಸಾವನದುರ್ಗದ ಅರಣ್ಯದಂಚಿನ ನಾಯಕನ ಪಾಳ್ಯದ ಬಳಿ ಅಸ್ವಸ್ಥಗೊಂಡು ಬಿದ್ದಿದ್ದ 6ತಿಂಗಳ ಚಿರತೆ ಮರಿಯನ್ನು ರಕ್ಷಿಸಲಾಗಿದೆ.

ಚಿರತೆಯನ್ನು ಕಂಡ ಗ್ರಾಮಸ್ಥರು ಕೂಡಲೇ ಅರಣ್ಯಾಧಿಕಾರಿ ಸುದರ್ಶನ್ ಅವರಿಗೆ ಸುದ್ದಿ ಮುಟ್ಟಿಸಿದ್ದಾರೆ. ತಕ್ಷಣ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಕಾಲಿಗೆ ಉರುಳು ಹಾಕಿ ಸಿಲುಕಿಕೊಂಡಿದ್ದ ಮರಿಗೆ ನೀರು ಕುಡಿಸಿ ಬನ್ನೇರುಘಟ್ಟ ಅರಣ್ಯಕ್ಕೆ ಕೊಂಡೊಯ್ದರು. ಅರಣ್ಯಾಧಿಕಾರಿ ಶಿವರಾಮ್ ಹಾಗೂ ಸಿಬ್ಬಂದಿ ಚಿರತೆ ಮರಿಯನ್ನು ಸಾಗಿಸಲು ನೆರವಾದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.