ADVERTISEMENT

ಆಂಗ್ಲ ಮಾಧ್ಯಮ ಶಾಲೆ ಗ್ರಾಮೀಣರಿಗೆ ವರದಾನ

​ಪ್ರಜಾವಾಣಿ ವಾರ್ತೆ
Published 23 ಜೂನ್ 2012, 19:30 IST
Last Updated 23 ಜೂನ್ 2012, 19:30 IST

ಧರ್ಮಪುರ: ಆಂಗ್ಲ ಮಾಧ್ಯಮ ಶಿಕ್ಷಣ ಜಾರಿಗೊಳಿಸವ ಮೂಲಕ ಸರ್ಕಾರ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿದ್ದು, ಶಿಕ್ಷಕರು ಗುಣಾತ್ಮಕ ಶಿಕ್ಷಣ ನೀಡಲು ಮುಂದಾಗಬೇಕು ಎಂದು ಕ್ಷೇತ್ರ ಸಮನ್ವಯ ಅಧಿಕಾರಿ ಗೀತಾ ಕರೆ ನೀಡಿದರು.

 ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಶನಿವಾರ ಧರ್ಮಪುರ, ಹರಿಯಬ್ಬೆ, ಖಂಡೇನಹಳ್ಳಿ ಮತ್ತು ಅಬ್ಬಿನಹೊಳೆ ಕ್ಲಸ್ಟರ್ ವತಿಯಿಂದ ಹಮ್ಮಿಕೊಂಡಿದ್ದ ` ಕ್ಲಸ್ಟರ್ ಸಮಲೋಚನಾ ಸಭೆ~ ಉದ್ಘಾಟಿಸಿ ಅವರು ಮಾತನಾಡಿದರು.

 ಕ್ಲಸ್ಟರ್ ಮಟ್ಟದ `ಸಮೂಹ ಸಿಂಚನ~ ಮಾಸಿಕ ಸಂಚಿಕೆಯನ್ನು ಬಿಡುಗಡೆ ಮಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಪಿ. ರಾಮಯ್ಯ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಆರ್ಥಿಕ ತೊಂದರೆಯಿಂದ ಶಿಕ್ಷಣ ಮುಂದುವರಿಸಲು ಸಾಧ್ಯವಾಗದಂತಹ ವಿದ್ಯಾರ್ಥಿಗಳನ್ನು ಶಿಕ್ಷಕರು ಗುರುತಿಸಬೇಕು. ಅಂತಹ ವಿದ್ಯಾರ್ಥಿಗಳನ್ನು ಕಸ್ತೂರ ಬಾ ಶಾಲೆಗೆ ಸೇರಿಸಿ ಅಲ್ಲಿ ಅವರಿಗೆ ಉಚಿತವಾದ ಶೈಕ್ಷಣಿಕ ಕೊಡಸಬೇಕು.

 `ಕಡ್ಡಾಯ ಶಿಕ್ಷಣದ ಅಡಿಯಲ್ಲಿ ಗುಣಾತ್ಮಕ ಶಿಕ್ಷಣ~ ತತ್ವಕ್ಕೆ ಅನುಗುಣವಾಗಿ ಪ್ರತಿಯೊಬ್ಬ ಶಿಕ್ಷಕರು  ತಮ್ಮ ಕರ್ತವ್ಯಪ್ರಜ್ಞೆಯನ್ನು ಅರಿತು ಕೆಲಸ ನಿರ್ವಹಿಸಬೇಕು ಎಂದರು.

 ಸನ್ಮಾನ ಸ್ವೀಕರಿಸಿದ ಕಾರವಾರ ಜಿಲ್ಲಾ ಉಪ ನಿರ್ದೇಶಕ ರೇವಣಸಿದ್ದಪ್ಪ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಸೇವೆ ಸಲ್ಲಿಸುವ ಮೂಲಕ ಆತ್ಮ ಗೌರವ ಹೆಚ್ಚಿಸಿಕೊಳ್ಳಿ ಎಂದು ಶಿಕ್ಷಕರಿಗೆ ಕಿವಿಮಾತು ಹೇಳಿದರು.

  ಶಿಕ್ಷಕರ ಸಂಘದ ಅಧ್ಯಕ್ಷ ಏಕಾಂತಪ್ಪ, ಕಾರ್ಯದರ್ಶಿ ರಮೇಶ್‌ನಾಯ್ಕ, ಮೂರ್ತಿ, ಸಹಾಯಕ ನಿರ್ದೇಶಕ ಚಿನ್ನರಾಜು, ತಿಪ್ಪೇಸ್ವಾಮಿ, ಶಿಕ್ಷಣ ಸಂಯೋಜಕ ಸತೀಶ್, ಸುನಂದಮ್ಮ ಮಾತನಾಡಿದರು.

 ಗುರುಮೂರ್ತಿ, ಶಿವಕುಮಾರ್, ಸಿಆರ್‌ಪಿ ನಾಗರಾಜು, ಚನ್ನಕೇಶವಗೌಡ, ಮುಖ್ಯ ಶಿಕ್ಷಕ ಹನುಮಂತರಾಯ, ಮಂಜುನಾಥ್, ರಂಗನಾಥ್ ಉಪಸ್ಥಿತರಿದ್ದರು. ಸಣ್ಣಗಂಗಮ್ಮ ಪ್ರಾರ್ಥಿಸಿದರು. ಗುರುಸ್ವಾಮಿ ಸ್ವಾಗತಿಸಿದರು. ಓ. ರಂಗನಾಥ್ ಕಾರ್ಯಕ್ರಮ ನಿರೂಪಿಸಿದರು. ಲಕ್ಕಪ್ಪ ವಂದಿಸಿದರು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.