ADVERTISEMENT

ಆಟೊ ಚಾಲಕರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 15 ಜೂನ್ 2011, 19:30 IST
Last Updated 15 ಜೂನ್ 2011, 19:30 IST

ತುಮಕೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಟೊ ಚಾಲಕರು ನಗರದಲ್ಲಿ ಬುಧವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.ನಗರ ಸಾರಿಗೆ ಬಸ್‌ಗಳ ಸಂಚಾರಕ್ಕೆ ಅನುಮತಿ ನೀಡಿರುವುದರಿಂದ ಆಟೊ ಚಾಲಕರ ಆದಾಯ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿದ್ದು ಸಂಕಷ್ಟ ಸ್ಥಿತಿಯಲ್ಲಿದ್ದಾರೆ ಎಂದು ಅಖಿಲ ಕರ್ನಾಟಕ ಆಟೋ ಚಾಲಕರ ಕಲ್ಯಾಣ ಜಂಟಿ ಕ್ರಿಯಾ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ವಿ.ಪ್ರತಾಪ್ ಹೇಳಿದರು.

ಪ್ರತಿಭಟನಾ ಮೆರವಣಿಗೆ ನೇತೃತ್ವ ವಹಿಸಿದ್ದ ಅವರು, ಜಿಲ್ಲಾಧಿಕಾರಿ ಕಚೇರಿ ಬಳಿ ಆಟೊ ಚಾಲಕರನ್ನು ಉದ್ದೇಶಿಸಿ ಮಾತನಾಡಿದರು. ಸರ್ಕಾರ ಏಕಾಏಕಿ ನಗರ ಸಾರಿಗೆ ಪ್ರಾರಂಭಿಸಿದ್ದರಿಂದ ಆಟೊ ಚಾಲಕರ ಆದಾಯ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿದೆ.

ಚಾಲಕರ ಕುಟುಂಬ ಒಪ್ಪೊತ್ತಿನ ಊಟಕ್ಕೆ ಪರದಾಡುವಂತಾಗಿದೆ. ಪರ್ಯಾಯ ಉದ್ಯೋಗ ಒದಗಿಸಬೇಕು. ಇಲ್ಲದಿದ್ದರೆ ಜೂನ್ 20ರಿಂದ ನಿರಂತರ ಚಳವಳಿ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.ತಾಲ್ಲೂಕು ಘಟಕದ ಅಧ್ಯಕ್ಷ ಕುಮಾರಸ್ವಾಮಿ, ನಗರ ಘಟಕದ ಅಧ್ಯಕ್ಷ ನರಸಿಂಹಮೂರ್ತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.