
ಪ್ರಜಾವಾಣಿ ವಾರ್ತೆಚಿಕ್ಕಬಳ್ಳಾಪುರ: ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯರ ಸಂಘದ ಅಧ್ಯಕ್ಷ ಡಾ. ರವೀಂದ್ರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಲಾಡ್ಜ್‌ವೊಂದರಲ್ಲಿ ಭಾನುವಾರ ನಡೆದಿದೆ.
ಡಾ.ರವೀಂದ್ರ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಸನದ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರಾಗಿರುವ ಡಾ.ರವೀಂದ್ರ ಅವರು ಭಾನುವಾರ ಚಿಕ್ಕಬಳ್ಳಾಪುರಕ್ಕೆ ಆಗಮಿಸಿದ್ದಾರೆ. ಖಾಸಗಿ ಲಾಡ್ಜ್‌ನಲ್ಲಿ ಕೊಠಡಿ ಪಡೆದಿದ್ದಾರೆ. ಮಧ್ಯಾಹ್ನದ ವೇಳೆಗೆ ಅವರು ವಿಷ ಸೇವಿಸಿರುವುದು ಬೆಳಕಿಗೆ ಬಂತು.
ಅವರನ್ನು ಕೂಡಲೇ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಸ್ಥಿತಿ ಗಂಭೀರವಾಗಿರುವ ಕಾರಣ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.