ADVERTISEMENT

ಆರ್‌ಟಿಪಿಎಸ್: 2 ಘಟಕಗಳು ಪುನರಾರಂಭ

​ಪ್ರಜಾವಾಣಿ ವಾರ್ತೆ
Published 5 ಜುಲೈ 2012, 19:30 IST
Last Updated 5 ಜುಲೈ 2012, 19:30 IST

ರಾಯಚೂರು: ಬಾಯ್ಲರ್ ಕೊಳವೆಯಲ್ಲಿ ಆವಿ ಸೋರಿಕೆ ಕಂಡು ಬಂದಿದ್ದರಿಂದ ಎರಡು ದಿನದ ಹಿಂದೆ ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸಿದ್ದ ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರದ (ಆರ್‌ಟಿಪಿಎಸ್) ಒಂದು ಮತ್ತು 7ನೇ ಘಟಕಗಳು ಮತ್ತೆ ಗುರುವಾರ ವಿದ್ಯುತ್ ಉತ್ಪಾದನೆ ಆರಂಭಿಸಿವೆ.

ಆರ್‌ಟಿಪಿಎಸ್‌ನ 1ರಿಂದ 7ರವರೆಗಿನ ಎಲ್ಲ ಘಟಕಗಳು ವಿದ್ಯುತ್ ಉತ್ಪಾದನೆಯಲ್ಲಿ ತೊಡಗಿವೆ. ಗುರುವಾರ 1,300 ಮೆಗಾವಾಟ್ ವಿದ್ಯುತ್ ಉತ್ಪಾದನೆ ಆಗಿದೆ. 8ನೇ ಘಟಕ ದುರಸ್ತಿ ಕಾರ್ಯ ಮುಂದುವರಿದಿದೆ ಎಂದು ಆರ್‌ಟಿಪಿಎಸ್ ಮೂಲಗಳು ಹೇಳಿವೆ.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.