ರಾಯಚೂರು: ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದಿಂದ ವಿದ್ಯುತ್ ಪೂರೈಕೆಯ 220 ಕೆ.ವಿ. ವಿದ್ಯುತ್ ಮಾರ್ಗದಲ್ಲಿ ಸೋಮವಾರ ಬೆಳಗಿನ ಜಾವ ತಾಂತ್ರಿಕ ತೊಂದರೆ ಕಾಣಿಸಿಕೊಂಡಿದ್ದರಿಂದ ಶಾಖೋತ್ಪನ್ನ ವಿದ್ಯುತ್ ಸ್ಥಾವರದ 1,2 ಮತ್ತು 3ನೇ ಘಟಕಗಳು ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸಿವೆ.
ತಾಂತ್ರಿಕ ತೊಂದರೆ ಕಂಡುಬಂದಿದ್ದರಿಂದ ಮೂರು ಘಟಕಗಳಿಂದ ಒಟ್ಟು 630 ಮೆಗಾವಾಟ್ ವಿದ್ಯುತ್ ಉತ್ಪಾದನೆ ಸ್ಥಗಿತಗೊಂಡಿತು. ಇದರಿಂದ ರಾಯಚೂರು ನಗರ, ರಾಯಚೂರು ಜಿಲ್ಲೆ ಸೇರಿದಂತೆ ಹೈದಾರಾಬಾದ್ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಂಡು ಬೆಳಿಗ್ಗೆಯಿಂದ ವಿದ್ಯುತ್ ಇಲ್ಲದೇ ಜನತೆ ಪರದಾಡಿದರು.
‘ತಾಂತ್ರಿಕ ಸಮಸ್ಯೆ ಸರಿಪಡಿಸುವ ಪ್ರಯತ್ನ ನಡೆದಿದೆ. ಸೋಮವಾರ ಮಧ್ಯಾಹ್ನ 1 ಮತ್ತು 2ನೇ ಘಟಕಗಳು ವಿದ್ಯುತ್ ಉತ್ಪಾದನೆ ಆರಂಭಿಸಿವೆ. 3ನೇ ಘಟಕವು ರಾತ್ರಿ ಹೊತ್ತಿಗೆ ವಿದ್ಯುತ್ ಉತ್ಪಾದನೆ ಆರಂಭಿಸಲಿದೆ‘ ಎಂದು ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರದ ಕಾರ್ಯನಿರ್ವಾಹಕ ನಿರ್ದೇಶಕ ಭಾಸ್ಕರ್ ’ಪ್ರಜಾವಾಣಿ’ಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.