ಶಿರಾ: ಕೆರೆ ಗುಂಡಿಯಲ್ಲಿ ಈಜಲು ಹೋದ ವಿದ್ಯಾರ್ಥಿಗಳಿಬ್ಬರು ಆಕಸ್ಮಿಕವಾಗಿ ಮುಳುಗಿ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಬೇವಿನಹಳ್ಳಿಯಲ್ಲಿ ಬುಧವಾರ ನಡೆದಿದೆ.
ಸುಭಾಷ್ (15), ಜಯಕುಮಾರ್ (15) ಮೃತಪಟ್ಟ ವಿದ್ಯಾರ್ಥಿಗಳು. ಒಂಬತ್ತನೇ ತರಗತಿ ತೇರ್ಗಡೆಯಾಗಿ ಎಸ್‌ಎಸ್‌ಎಲ್‌ಸಿಗೆ ಕಾಲಿರಿಸಿದ್ದರು. ಬುಧವಾರ ಮಧ್ಯಾಹ್ನ ಕೆರೆ ಗುಂಡಿಯಲ್ಲಿ ನಿಂತಿದ್ದ ನೀರಿನಲ್ಲಿ ಈಜಲು ಹೋಗಿದ್ದರು. ಈ ವೇಳೆ ಸುಭಾಷ್ ಆಯತಪ್ಪಿ ನೀರಿನಲ್ಲಿ ಮುಳುಗಿದ.
ಆಗ ವಿಜಯ್‌ಕುಮಾರ್ ಆತನ ರಕ್ಷಣೆಗೆ ಮುಂದಾದಾಗ ಆತನ ಸಾವಿಗೂ ಕಾರಣವಾಯಿತು ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ತಾವರೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.