ADVERTISEMENT

ಈಡಿಗ ಸಂಘದಿಂದ ಉಚಿತ ತರಬೇತಿ

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2012, 19:30 IST
Last Updated 4 ನವೆಂಬರ್ 2012, 19:30 IST

ಮಂಡ್ಯ: ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನ ಅಂಗವಾಗಿ ಇಲ್ಲಿನ ಕರ್ನಾಟಕ ಸಂಘವು ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ `ಕುವೆಂಪು ಅವರ ವೈಚಾರಿಕ ನಿಲುವುಗಳು~ ಕುರಿತು ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದೆ.

ರೂ. 5 ಸಾವಿರ  (ಪ್ರಥಮ), ರೂ. 3 ಸಾವಿರ (ದ್ವಿತೀಯ) ಹಾಗೂ ರೂ. 2 ಸಾವಿರ (ತೃತೀಯ) ಬಹುಮಾನದ ಜತೆಗೆ ಪ್ರಶಸ್ತಿ ಪತ್ರ ನೀಡಲಾಗುವುದು.  ಕುವೆಂಪು ಅವರ ಜನ್ಮ ದಿನ ಡಿ. 29ರಂದು ಬಹುಮಾನ ವಿತರಿಸಲಾಗುವುದು ಎಂದು ಸಂಘದ ಅಧ್ಯಕ್ಷ ಪ್ರೊ. ಜಯಪ್ರಕಾಶಗೌಡ ಶನಿವಾರ ಸುದ್ದಿಗಾರರಿಗೆ ತಿಳಿಸಿದರು.

ಸ್ವತಃ 15ರಿಂದ 20ಪುಟಗಳಲ್ಲಿ ಪ್ರಬಂಧ ಬರೆದಿರಬೇಕು. ಪ್ರಬಂಧವನ್ನು ಕಾಲೇಜಿನ ಪ್ರಾಂಶುಪಾಲರು ಅಥವಾ ಕೇಂದ್ರದ ನಿರ್ದೇಶಕರಿಂದ ದೃಢೀಕರಿಸಿ ಡಿ.5 ರೊಳಗೆ ಅಧ್ಯಕ್ಷರು, ಕರ್ನಾಟಕ ಸಂಘ, ಗುರುಭವನ ಹಿಂಭಾಗ, ಆರ್.ಪಿ. ರಸ್ತೆ, ಮಂಡ್ಯ-571401 ಇಲ್ಲಿಗೆ ಕಳುಹಿಸಬೇಕು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.