ADVERTISEMENT

ಉಚಿತ ಆರೋಗ್ಯ ಶಿಬಿರ ಬಡವರಿಗೆ ವರದಾನ

​ಪ್ರಜಾವಾಣಿ ವಾರ್ತೆ
Published 24 ಜೂನ್ 2012, 19:30 IST
Last Updated 24 ಜೂನ್ 2012, 19:30 IST

ನಾಯಕನಹಟ್ಟಿ: ಉಚಿತ ಆರೋಗ್ಯ ತಪಾಸಣಾ ಶಿಬಿರಗಳು ಬಡವರಿಗೆ ತುಂಬಾ ಸಹಕಾರಿಯಾಗುತ್ತವೆ ಎಂದು ಶಾಸಕ ಎನ್.ವೈ. ಗೋಪಾಲಕೃಷ್ಣ ಹೇಳಿದರು.

ತಾಲ್ಲೂಕು ವಾಲ್ಮೀಕಿ ನೌಕರರ ಸಂಘ  ಹಾಗೂ ಭಾರತೀಯ ವೈದ್ಯಕೀಯ ಸಂಘದ ವತಿಯಿಂದ ಭಾನುವಾರ ನಡೆದ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

 ಬರ ಪೀಡಿತ ಪ್ರದೇಶಗಳಲ್ಲಿ ಇಂತಹ ಆರೋಗ್ಯ ಶಿಬಿರಗಳ ಅವಶ್ಯಕತೆ ಇದೆ. ಅದನ್ನು ಮನಗಂಡ ವಾಲ್ಮೀಕಿ ನೌಕರರ ಸಂಘ ವೈದ್ಯಕೀಯ ತಪಾಸಣಾ ಶಿಬಿರವನ್ನು ಏರ್ಪಡಿಸಿರುವುದು ಶ್ಲಾಘನೀಯ. ವಾಲ್ಮೀಕಿ ನೌಕರರು ಇಂತಹ ಕಾರ್ಯಕ್ರಮಗಳನ್ನು ಹೆಚ್ಚು ಹಮ್ಮಿಕೊಳ್ಳಬೇಕು. ಅದಕ್ಕೆ ಬೇಕಾದಂತಹ ಸಹಕಾರವನ್ನು ನೀಡುತ್ತೇನೆ.  ಹೋಬಳಿಯ ಜನತೆ ಇಂತಹ ಶಿಬಿರಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಭಾನುವಾರವಾದರೂ ಸಾಕಷ್ಟು ವೈದ್ಯಾಧಿಕಾರಿಗಳು ಶಿಬಿರಕ್ಕೆ ಬಂದಿರುವುದು ಸಂತಸ ಎಂದು ಅಭಿನಂದನೆ ಸಲ್ಲಿಸಿದರು.

ಜಿಲ್ಲಾ ಪಂಚಾಯ್ತಿ ಸದಸ್ಯೆ ಜಯಮ್ಮ ಬಾಲರಾಜ್ ಮಾತನಾಡಿ, ವೈದ್ಯರು ಸದಾ ಹಸನ್ಮುಖಿಯಾಗಿ ಕರ್ತವ್ಯ ನಿರ್ವಹಿಸಿ. ವೈದ್ಯರ ಪ್ರೀತಿ, ವಾತ್ಸಲ್ಯವೇ ರೋಗಿಗಳಿಗೆ ದಿವ್ಯ ಔಷಧವಾಗುತ್ತದೆ ಎಂದರು.

ಜೆಡಿಎಸ್ ಮುಖಂಡ ತಿಪ್ಪೇಸ್ವಾಮಿ, ಕೆಪಿಸಿಸಿ ಸದಸ್ಯ ಬಾಲರಾಜ್, ತಾಲ್ಲೂಕು ವೈದ್ಯಾಧಿಕಾರಿ ಡಾ.ಸಿ.ಎಲ್. ಫಾಲಾಕ್ಷ, ತಾಲ್ಲೂಕು ವಾಲ್ಮೀಕಿ ನೌಕರರ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ ಮಾತನಾಡಿದರು.

ವಾಲ್ಮೀಕಿ ಜನಾಂಗದ ಜನಪ್ರತಿನಿಧಿಗಳು, ನೌಕರರು, ವಾಲ್ಮೀಕಿ ಸಂಘದ ತಾಲ್ಲೂಕು, ಹೋಬಳಿ ಘಟಕದ ಪದಾಧಿಕಾರಿಗಳು, ತಾಲ್ಲೂಕು ಪಂಚಾಯ್ತಿ ಸದಸ್ಯೆ ಬೋರಮ್ಮ ಬಂಗಾರಪ್ಪ, ಶ್ರೀಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಂ.ವೈ.ಟಿ. ಸ್ವಾಮಿ, ಗ್ರಾಮ ಪಂಚಾಯ್ತಿ ಅಧ್ಯಕ್ಷ ತಿಪ್ಪೇಸ್ವಾಮಿ, ಉಪಾಧ್ಯಕ್ಷ ಮುನಿಯಪ್ಪ, ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ತಿಪ್ಪೇಸ್ವಾಮಿ ಹಾಜರಿದ್ದರು. ಶಿಕ್ಷಕ ಫಣೀಂದ್ರಕುಮಾರ್ ವಂದಿಸಿದರು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.