
ಪ್ರಜಾವಾಣಿ ವಾರ್ತೆಬೆಂಗಳೂರು: ಡಾ. ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನವು ಕುವೆಂಪು ಪ್ರತಿಷ್ಠಾನದ ಸಹಯೋಗದಲ್ಲಿ ನವೆಂಬರ್ 11ರಿಂದ 13ರವರೆಗೆ ಕುಪ್ಪಳಿಯಲ್ಲಿ ರಾಜ್ಯ ಮಟ್ಟದ ಕಥಾ ಕಮ್ಮಟ ಏರ್ಪಡಿಸಲಿದೆ.
ಭಾಷಾ ತಜ್ಞ ಡಾ. ಕೆ.ವಿ. ನಾರಾಯಣ ನಿರ್ದೇಶನದಲ್ಲಿ ನಡೆಯಲಿರುವ ಈ ಕಮ್ಮಟದಲ್ಲಿ ಭಾಗವಹಿಸುವವರಿಗೆ ಉಚಿತ ಅಧ್ಯಯನ ಸಾಮಗ್ರಿ, ವಸತಿ ಮತ್ತು ಊಟದ ವ್ಯವಸ್ಥೆ ಕಲ್ಪಿಸಲಾಗುವುದು. ಯಾವುದೇ ಶುಲ್ಕವಿಲ್ಲ ಎಂದು ಟ್ರಸ್ಟ್ ಅಧ್ಯಕ್ಷ ಡಾ. ಕೆ. ಪುಟ್ಟಸ್ವಾಮಿ ತಿಳಿಸಿದ್ದಾರೆ.
ಆಸಕ್ತರು ತಮ್ಮ ಸ್ವ ವಿವರಗಳನ್ನು ಅಕ್ಟೋಬರ್ 22ರೊಳಗಾಗಿ ಡಾ. ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನ, ನಂ.90, 16ನೇ ಅಡ್ಡ ರಸ್ತೆ, ನಾಲ್ಕನೇ ಹಂತ, ಜೆ.ಪಿ. ನಗರ, ಬೆಂಗಳೂರು-78 ಈ ವಿಳಾಸಕ್ಕೆ ಕಳುಹಿಸಬಹುದು. ಈ ಮೇಲ್ ವಿಳಾಸ: drbrtrust@gmail.com
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.