ADVERTISEMENT

ಎಚ್‌ಡಿಕೆ ಆರೋಪ ಮುಕ್ತ: ಸಂಭ್ರಮ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2011, 19:30 IST
Last Updated 22 ಅಕ್ಟೋಬರ್ 2011, 19:30 IST

ಚಿಕ್ಕಬಳ್ಳಾಪುರ: ಗಣಿ ಗುತ್ತಿಗೆ ಮತ್ತು ನಿವೇಶನ ಮಂಜೂರಾತಿ ಅರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಶಾಸಕಿ ಅನಿತಾ ಕುಮಾರಸ್ವಾಮಿ ವಿರುದ್ಧ ದಾಖಲಾಗಿದ್ದ ಖಾಸಗಿ ದೂರನ್ನು ಹೈಕೋರ್ಟ್ ವಜಾ ಮಾಡಿದ ಹಿನ್ನೆಲೆಯಲ್ಲಿ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಶನಿವಾರ ಪಟಾಕಿ ಸಿಡಿಸಿ ಸಂಭ್ರಮ ಆಚರಿಸಿದರು.

ನಗರದ ಹೊರವಲಯದ ಶನೇಶ್ವರಸ್ವಾಮಿ ದೇವಾಲಯ ಆವರಣದಲ್ಲಿ 101 ತೆಂಗಿನಕಾಯಿ ಒಡೆದು ವಿಶೇಷ ಪೂಜೆ ಸಲ್ಲಿಸಿದ ಪಕ್ಷದ ಕಾರ್ಯಕರ್ತರು ನಂತರ ಸರ್ ಎಂ.ವಿಶ್ವೇಶ್ವರಯ್ಯ ವೃತ್ತದತ್ತ ತೆರಳಿ ಪಟಾಕಿ ಸಿಡಿಸಿದರು. ಬಳಿಕ ಸಿಹಿ ಹಂಚಿದರು.

ಶಾಸಕ ಕೆ.ಪಿ.ಬಚ್ಚೇಗೌಡ ಮಾತನಾಡಿ, ~ಖಾಸಗಿ ದೂರನ್ನು ಹೈಕೋರ್ಟ್ ವಜಾಗೊಳಿಸಿರುವುದರಿಂದ ಎಚ್.ಡಿ.ಕುಮಾರಸ್ವಾಮಿ ದಂಪತಿ ಆರೋಪ ಮುಕ್ತರಾಗಿದ್ದಾರೆ. ರಾಜಕೀಯ ಕುತಂತ್ರದಿಂದ ದೂರು ದಾಖಲಿಸಲಾಗಿತ್ತು ಎಂಬುದು ಇದರಿಂದ ಸಾಬೀತಾಗುತ್ತದೆ~ ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯ ಪಿ.ಎನ್.ಮುನೇಗೌಡ, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ವೆಂಕಟನಾರಾಯಣಪ್ಪ, ಸದಸ್ಯ ಪಿ.ಎ.ೀಹನ್, ಜೆಡಿಎಸ್ ಮುಖಂಡರಾದ ಕೆ.ಆರ್.ರೆಡ್ಡಿ, ರಾಜಣ್ಣ, ಕೊಳವನಹಳ್ಳಿ ಮುನಿರಾಜು, ನಾರಾಯಣಸ್ವಾಮಿ, ಯಲುವಹಳ್ಳಿ ಸೊಣ್ಣೇಗೌಡ, ಕೃಷ್ಣಪ್ಪ, ಅಂಗರೇಖನಹಳ್ಳಿ ರವಿಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.