ಮಂಡ್ಯ: ಕರ್ತವ್ಯ ನಿಷ್ಠೆ, ಸಮಯ ಪ್ರಜ್ಞೆ ಇದ್ದರೆ ಉನ್ನತ ಸ್ಥಾನಕ್ಕೆ ಏರಬಹುದು ಎಂದು ಜನತಾ ಶಿಕ್ಷಣ ಸಂಸ್ಥೆ (ಪಿಇಟಿ) ಅಧ್ಯಕ್ಷ ಎಚ್.ಡಿ.ಚೌಡಯ್ಯ ಹೇಳಿದರು.
ನಗರದ ರೈತ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಸಮಾರಂಭದಲ್ಲಿ ವಿಶ್ವ ಒಕ್ಕಲಿಗರ ಜನಜಾಗೃತಿ ಸಂಘ ನೀಡಿದ `ಒಕ್ಕಲಿಗರ ರತ್ನ~ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.
ಸಾರ್ವಜನಿಕ ಜೀವನದಲ್ಲಿ ಓರ್ವ ವ್ಯಕ್ತಿ ಬಹು ಎತ್ತರಕ್ಕೆ ಬೆಳೆಯಬೇಕಾದರೆ, ಸಮುದಾಯದ ಕೊಡುಗೆಯೂ ಇರುತ್ತದೆ. ಪುರಸ್ಕಾರ ದೊರೆತರೆ ಅದರ ಪಾಲು ಪುರಸ್ಕೃತರ ಏಳಿಗೆಗೆ ದುಡಿದ ಎಲ್ಲರಿಗೂ ಸಲ್ಲುತ್ತದೆ ಎಂದರು.
ಶಾಸಕ ಎಂ.ಶ್ರೀನಿವಾಸ್ ಅವರಿಗೂ `ಒಕ್ಕಲಿಗರ ರತ್ನ~ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಶಾಸಕ ಬಿ.ರಾಮಕೃಷ್ಣ ಅಧ್ಯಕ್ಷತೆ ವಹಿಸಿದ್ದರು. ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ, ಮಾಜಿ ಶಾಸಕರಾದ ಮಧು ಜಿ.ಮಾದೇಗೌಡ, ಡಿ.ಸಿ.ತಮ್ಮಣ್ಣ, ಸಂಘದ ಅಧ್ಯಕ್ಷ ಕೆ.ಎಂ.ರಾಮಕೃಷ್ಣ, ಪಿ.ರವಿಕುಮಾರ್, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.