
ಪ್ರಜಾವಾಣಿ ವಾರ್ತೆ
ಚಳ್ಳಕೆರೆ (ಚಿತ್ರದುರ್ಗ ಜಿಲ್ಲೆ): ತಾಲ್ಲೂಕಿನ ದೊಡ್ಡ ಉಳ್ಳಾರ್ತಿಯಲ್ಲಿ ಕಲುಷಿತ ನೀರು ಸೇವಿಸಿದ ಪರಿಣಾಮ ಮಕ್ಕಳು ಹಾಗೂ ಹಿರಿಯರು ಸೇರಿದಂತೆ 13 ಜನರು ಅಸ್ವಸ್ಥರಾಗಿ ಸೋಮವಾರ ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರು.
ಬೆಳಿಗ್ಗೆಯಿಂದ ಮಕ್ಕಳು ಅಸ್ವಸ್ಥರಾಗಿರುವುದನ್ನು ಕಂಡ ಪೋಷಕರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದರು. ಇದಾದ ನಂತರ 4 ಜನ ಹಿರಿಯರೂ ಸಹ ಅಸ್ವಸ್ಥರಾದರು. ಈ ಕುರಿತು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪಾಲಾಕ್ಷ ಪ್ರತಿಕ್ರಿಯೆ ನೀಡಿ, ಗ್ರಾಮದಲ್ಲಿ ಈಗಾಗಲೇ ಹಿರಿಯರು ಹಾಗೂ ಚಿಕ್ಕ ಮಕ್ಕಳು ಸೇರಿದಂತೆ 13 ಮಂದಿ ವಾಂತಿ-ಭೇದಿಯಿಂದ ಅಸ್ವಸ್ಥರಾದವರಿಗೆ ಸೂಕ್ತ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿಸಿದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.