ADVERTISEMENT

ಕಶೆಟ್ಟಿಪಲ್ಲಿ ಸರ್ಕಾರಿ ಶಾಲೆಯ ವಿನೂತನ ಪ್ರಯೋಗ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2011, 7:10 IST
Last Updated 7 ಫೆಬ್ರುವರಿ 2011, 7:10 IST

ಶ್ರೀನಿವಾಸಪುರ: ವಿದ್ಯಾರ್ಥಿಗಳು ಸ್ವಾವಲಂಬನೆಯನ್ನು ಕಲಿಯಬೇಕು. ಸಣ್ಣ ಪುಟ್ಟ ಕೆಲಸಗಳಿಗೆ ಬೇರೆಯವರನ್ನು ಆಶ್ರಯಿಸುವುದರಿಂದ ಹಣ ಹಾಗೂ ಸಮಯ ಪೋಲಾಗುತ್ತದೆ ಎಂದು ಸಾಹಿತಿಸ.ರಘುನಾಥ ಹೇಳಿದರು.ತಾಲ್ಲೂಕಿನ ಕಶೆಟ್ಟಿಪಲ್ಲಿ ಗ್ರಾಮದ ಸರ್ಕಾರಿ ಉನ್ನತೀಕೃತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಭಾನುವಾರ ಏರ್ಪಡಿಸಲಾಗಿದ್ದ ಸೈಕಲ್ ರಿಪೇರಿ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು

ಸರ್ಕಾರಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸುವುದರ ಮೂಲಕ ಉಪಕಾರ ಮಾಡಿದೆಆದರೆ ಸೈಕಲ್ ರಿಪೇರಿ ಹೆಸರಲ್ಲಿ ಶಾಲೆಗೆ ತಡವಾಗಿ ಬರುವುದನ್ನುತಪ್ಪಿಸುವ ಉದ್ದೇಶದಿಂದ ವಿದ್ಯಾರ್ಥಿಗಳಿಗೆ ಸೈಕಲ್ ರಿಪೇರಿಯಲ್ಲಿ ತರಬೇತಿ ನೀಡಲಾಗುತ್ತಿದೆ.

 ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರಮಣಾರೆಡ್ಡಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಸೈಕಲ್ ಪಂಕ್ಚರ್ ಆದರೂ ದೂರದ ಪೇಟೆಗೆ ಕೊಂಡೊಯ್ಯಬೇಕಾದ ಪರಿಸ್ಥಿತಿ ಇದೆಸೈಕಲ್ ಸರಿಯಿಲ್ಲ ಎಂದರೆ ಅದರ ಹೆಸರಲ್ಲಿ ಮಕ್ಕಳು ಶಾಲೆಗೆ ಗೈರು ಹಾಜರಾಗುತ್ತಾ
ಅವರು ಸಣ್ಣ ಪುಟ್ಟ ರಿಪೇರಿಗಳನ್ನು ಕಲಿತರೆ ಸಮಸ್ಯೆ ಇರುವುದಿಲ್ಲ.ತಜ್ಞರಿಂದ ಸೈಕಲ್‌ನ ಮುಖ್ಯ ಭಾಗಗಳ ಪರಿಚಯ. ಸಂಭವನೀಯ ಸಮಸ್ಯೆ ಮತ್ತು ಅದರ ಪರಿಹಾರದ ಬಗ್ಗೆ ತರಬೇತಿ ನೀಡಲಾಯಿತು.ಪರಿಚಯ. ಸಂಭವನೀಯ ಸಮಸ್ಯೆ ಮತ್ತು ಅದರ ಪರಿಹಾರದ ಬಗ್ಗೆ ತರಬೇತಿ ನೀಡಲಾಯಿತು ಎಂದು ಹೇಳಿದರು.

 .

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT