ADVERTISEMENT

ಕಾಡಿನ ಉಳಿವು ಅಗತ್ಯ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2012, 19:30 IST
Last Updated 1 ಅಕ್ಟೋಬರ್ 2012, 19:30 IST

ಶಿವಮೊಗ್ಗ: ಮನುಷ್ಯನ ಒಳಗಿನ ಮೃಗತ್ವ ಅಳಿದರೆ ಕಾಡು ಉಳಿಯುತ್ತದೆ. ಎಲ್ಲರ ಬದುಕಿಗಾಗಿ ಕಾಡು ಉಳಿಯಲೇಬೇಕು ಎಂದು ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ್ ಪ್ರತಿಪಾದಿಸಿದರು.

ನಗರದಲ್ಲಿ ಅರಣ್ಯ ಇಲಾಖೆ ವನ್ಯಜೀವಿ ವಿಭಾಗ ಸೋಮವಾರ 58ನೇ ವನ್ಯಜೀವಿ  ಸಪ್ತಾಹದ ಅಂಗವಾಗಿ ಹಮ್ಮಿಕೊಂಡಿದ್ದ ಬೈಸಿಕಲ್ ಹಾಗೂ ಕಾಲ್ನಡಿಗೆ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ವನ ಹಾಗೂ ವನ್ಯಜೀವಿ ರಕ್ಷಣೆ ಕೇವಲ ಸರ್ಕಾರದಿಂದ ಮಾತ್ರ ಸಾಧ್ಯವಿಲ್ಲ. ಇದಕ್ಕೆ ಜನರ ಸಹಭಾಗಿತ್ವ ಮುಖ್ಯ. ಈ ನಿಟ್ಟಿನಲ್ಲಿ ಮನುಷ್ಯ ತನ್ನ ಒಳಗಿನ ಮೃಗೀಯ ಗುಣಗಳನ್ನು ತೊಡೆದು ಹಾಕಿ, ಕಾಡು, ಕಾಡು ಪ್ರಾಣಿಗಳನ್ನು ರಕ್ಷಿಸುವ ಗುಣ ಬೆಳೆಸಿಕೊಳ್ಳಬೇಕು ಎಂದರು.

ನಗರಸಭಾ ಅಧ್ಯಕ್ಷ ಎಸ್.ಎನ್. ಚನ್ನಬಸಪ್ಪ ಹಾಗೂ ಜಿಲ್ಲಾಧಿಕಾರಿ ಎಂ.ವಿ. ವೇದಮೂರ್ತಿ ಮಾತನಾಡಿದರು.
ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಸಂಜಯ್ ಬಿಜ್ಜೂರ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸ್ಮಿತಾ ಬಿಜ್ಜೂರ್, ಉಪ ಸಂರಕ್ಷಣಾಧಿಕಾರಿ (ವನ್ಯಜೀವಿ ವಿಭಾಗ) ಟಿ.ಜೆ. ರವಿಕುಮಾರ್ ಮುಂತಾದವರು ಸಮಾರಂಭದಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.