ADVERTISEMENT

ಕಾನೂನು ಪಾಲನೆಯಿಂದ ಎಲ್ಲರಿಗೆ ಕ್ಷೇಮ

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2011, 19:30 IST
Last Updated 29 ಅಕ್ಟೋಬರ್ 2011, 19:30 IST

ಮಧುಗಿರಿ:  `ಎಲ್ಲರ ಶ್ರೇಯೋಭಿವೃದ್ಧಿಗೆ ಕಾನೂನು ಪಾಲನೆ ಅಗತ್ಯವಾಗಿದೆ~ ಎಂದು ಸುಪ್ರೀಂ ಕೋರ್ಟ್ ವಕೀಲಾರದ ಶೀಲಾ ಅನಿಶ್ ಅಭಿಪ್ರಾಯಪಟ್ಟರು.

ಇಲ್ಲಿನ ಮಲೀ ಮರಿಯಪ್ಪ ರಂಗಮಂದಿರದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘದ ವತಿಯಿಂದ ಏರ್ಪಡಿಸಿದ್ದ ಕಾನೂನು ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಉಪನ್ಯಾಸಕರಾದ ಧ್ಯಾನಾ ಮಾತನಾಡಿ, ಮಹಿಳೆ ಆರ್ಥಿಕವಾಗಿ ಸಬಲರಾಗುವುದರ ಜತೆಗೆ ಕಾನೂನಿನ ಅರಿವು ಹೊಂದಬೇಕು. ಸಾಮಾಜಿಕ ವಿಘಟನೆ ತಡೆಯುವಲ್ಲಿ ಮಹಿಳೆಯರ ಪಾತ್ರ ಪ್ರಮುಖವಾಗಿದೆ ಎಂದು ಹೇಳಿದರು.

ಸಿಡಿಪಿಓ ವಸಂತ ಎಂ.ಉಪ್ಪಾರ್ ಮಾತನಾಡಿ, ಇಂದಿನ ಆಧುನಿಕ ಯುಗದಲ್ಲೂ ಬಾಲ್ಯ ವಿವಾಹಗಳು ನೆಡೆಯುತ್ತಿವೆ. ಇವು ಸಾಮಾಜಿಕ ಸಮಸ್ಯೆಗಳಿಗೆ ಕಾರಣವಾಗಿವೆ. ಇಂತಹ ಪ್ರಕರಣಗಳು ಕಂಡುಬಂದರೆ ಸಾರ್ವಜನಿಕರು ಮಾಹಿತಿ ನೀಡಬೇಕು ಎಂದರು.

ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಸದಾನಂದ ಎಂ.ದೊಡ್ಡಮನಿ ಅಧ್ಯಕ್ಷತೆ ವಹಿಸಿದ್ದರು. ತ್ವರಿತ ವಿಲೇವಾರಿ ನ್ಯಾಯಾಲಯದ ನ್ಯಾಯಾಧೀಶ ಪಿ.ನಾರಾಯಣ ಆಚಾರ್ಯ ಉದ್ಘಾಟಿಸಿದರು.

ಪ್ರಧಾನ ಸಿವಿಲ್ ನ್ಯಾಯಾಧೀಶ ಆನಂದ್ ಟಿ.ಚವ್ಹಾಣ್, ಉಪ ವಿಭಾಗಾಧಿಕಾರಿ ಶಾಂತಾ ಎಲ್.ಹುಲ್ಮನಿ, ತಹಶೀಲ್ದಾರ್ ಆರ್.ನಾಗರಾಜಶೆಟ್ಟಿ, ವಕೀಲರ ಸಂಘದ ಅಧ್ಯಕ್ಷ ಟಿ.ದೇವರಾಜು, ಪುರಸಭಾಧ್ಯಕ್ಷ ಎಂ.ಕೆ.ನಂಜುಂಡಯ್ಯ, ಜಿ.ಟಿ.ರಂಗಪ್ಪ, ರೋಟರಿ ಅಧ್ಯಕ್ಷ ಮಧು, ವಕೀಲರ ಸಂಘದ ಕಾರ್ಯದರ್ಶಿ ಎಸ್.ಚಂದ್ರಶೇಖರ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.