ADVERTISEMENT

ಕಾರ್ಖಾನೆ ಕಾವಲುಗಾರನ ಕೊಲೆ: ಬಂಧನ

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2012, 9:05 IST
Last Updated 19 ಮಾರ್ಚ್ 2012, 9:05 IST

ಮಲೇಬೆನ್ನೂರು (ದಾವಣಗೆರೆ ಜಿಲ್ಲೆ): ಕಾರ್ಖಾನೆಯಲ್ಲಿ ಕಾವಲುಗಾರನ ತಲೆಗೆ ಮಾರಕಾಸ್ತ್ರದಿಂದ ಹೊಡೆದು ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಇಲ್ಲಿನ ಹೈಟನ್ ಇಂಡಸ್ಟ್ರಿಸ್ ಎಂಬ ಕಾರ್ಖಾನೆಯಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಬಹದ್ದೂರ್ (50) ಎಂಬವರು ಕೊಲೆಯಾದ ವ್ಯಕ್ತಿ.

ಶ್ವಾನದಳದೊಂದಿಗೆ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಸಿಬ್ಬಂದಿ, ಪರಿಶೀಲನೆ ನಡೆಸಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಹರಿಹರದ ಜಿಲಾನಿ ಎಂಬವರನ್ನು ಬಂಧಿಸಲಾಗಿದೆ. ಕೊಲೆಗೆ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.