ADVERTISEMENT

ಕಾಲೇಜು ಅಧ್ಯಾಪಕರ ಸಂಘಕ್ಕೆಮುರಿಗೇಂದ್ರಪ್ಪ ಅಧ್ಯಕ್ಷ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2012, 19:30 IST
Last Updated 3 ಆಗಸ್ಟ್ 2012, 19:30 IST

ದಾವಣಗೆರೆ: ಬೆಂಗಳೂರಿನಲ್ಲಿ ಈಚೆಗೆ ನಡೆದ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯ ಮತ್ತು ಕಾಲೇಜು ಅಧ್ಯಾಪಕರ ಸಂಘಗಳ ಒಕ್ಕೂಟದ ವಾರ್ಷಿಕ ಮಹಾಸಭೆಯಲ್ಲಿ  2012-14ನೇ ಸಾಲಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ದಾವಣಗೆರೆಯ ಎ.ವಿ. ಕಮಲಮ್ಮ ಮಹಿಳಾ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಸಿ.ಎಚ್. ಮುರಿಗೇಂದ್ರಪ್ಪ ಅಧ್ಯಕ್ಷರಾಗಿ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಬಿಇಎಸ್ ಕಾಲೇಜಿನ ಕೆ.ಎಂ. ನಾಗರಾಜು ಪ್ರಧಾನ ಕಾರ್ಯದರ್ಶಿಯಾಗಿ, ಸರ್ಕಾರಿ ಕಲಾ ಕಾಲೇಜಿನ ಇತಿಹಾಸ ವಿಭಾಗದ ಪ್ರೊ.ಕೆ.ಎಂ. ವೆಂಕಟಸ್ವಾಮಿ ರೆಡ್ಡಿ ಕೋಶಾಧಿಕಾರಿಯಾಗಿ, ಪ್ರೊ.ಶಿವಣ್‌ಕರ್ ಮತ್ತು ಪ್ರೊ.ಹಿರಿಯಣ್ಣ ಜಂಟಿ ಕಾರ್ಯದರ್ಶಿಗಳಾಗಿ ಆಯ್ಕೆಯಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.