ಮಡಿಕೇರಿ: ಕಾಂಗ್ರೆಸ್ ನೇತೃತ್ವದ ಕೇಂದ್ರ ಸರ್ಕಾರವು ಜನವಿರೋಧಿ ನೀತಿಯನ್ನು ಆನುಸರಿಸುತ್ತಿದೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಬಿಜೆಪಿ ಘಟಕವು ಶುಕ್ರವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.
ನಗರದ ಚೌಡೇಶ್ವರಿ ದೇವಾಲಯದಿಂದ ಮೆರವಣಿಗೆ ಆರಂಭಿಸಿದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ವಿವಿಧ ಘೋಷಣೆಗಳನ್ನು ಕೂಗಿದರು. ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು.
ಕೋಟೆ ಆವರಣದಲ್ಲಿ ಸಭೆ ಸೇರಿದ ನಂತರ ಮಾತನಾಡಿದ ಶಾಸಕ ಅಪ್ಪಚ್ಚು ರಂಜನ್, ರಸಗೊಬ್ಬರದ ಮೇಲಿನ ಸಬ್ಸಿಡಿ ಕಡಿತಗೊಳಿಸುವ ಮೂಲಕ ಕೇಂದ್ರ ಸರ್ಕಾರವು ರೈತ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಆರೋಪಿಸಿದರು.
ಜಿ.ಪಂ.ಅಧ್ಯಕ್ಷ ಶಾಂತೆಯಂಡ ರವಿ ಕುಶಾಲಪ್ಪ, ಮಾಜಿ ವಿಧಾನ ಪರಿಷತ್ ಸದಸ್ಯ ಎಸ್.ಜಿ.ಮೇದಪ್ಪ, ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ಡಿ.ಮಂಜುನಾಥ್, ಬಿಜೆಪಿ ಮುಖಂಡರಾದ ಸುನೀಲ್ ಸುಬ್ರಮಣಿ, ಬೆಲ್ಲು ಸೋಮಯ್ಯ, ನಾಪಂಡ ರವಿ ಕಾಳಪ್ಪ, ಇತರರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.