ADVERTISEMENT

ಖೋಟಾ ನೋಟು: ಬಂಧನ

​ಪ್ರಜಾವಾಣಿ ವಾರ್ತೆ
Published 1 ಜೂನ್ 2011, 19:30 IST
Last Updated 1 ಜೂನ್ 2011, 19:30 IST

ಶಿಡ್ಲಘಟ್ಟ: ಖೋಟಾ ನೋಟು ಹೊಂದಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ಒಂದು ಸಾವಿರ ಮುಖ ಬೆಲೆಯ 94 ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಖಚಿತ ಮಾಹಿತಿ ಮೇರೆಗೆ ಆರೋಪಿ ರಹಮತ್‌ನಗರದ ನಿವಾಸಿ ಟೈಲರ್ ಸಲಾಂ (45) ಬಂಧಿತ ಆರೋಪಿ. ಪಟ್ಟಣದ ಚಿಕ್ಕಬಳ್ಳಾಪುರ ರಸ್ತೆಯಲ್ಲಿನ ಕೆಇಬಿ ಸಬ್‌ಸ್ಟೇಷನ್ ಬಳಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಿಂತಾಮಣಿ ತಾಲ್ಲೂಕಿನ ಎಂ.ಗೊಲ್ಲಹಳ್ಳಿ ಮೂಲದ ಆರೋಪಿ ಸಲಾಂ ಪೊಲೀಸರನ್ನು ಕಂಡು ಓಡಲೆತ್ನಿಸಿದ್ದಾನೆ. ಆಗ ಪೊಲೀಸರು ಪರಿಶೀಲಿಸಿದಾಗ ಜೇಬಿನಲ್ಲಿ 94 ಸಾವಿರ ರೂಪಾಯಿ ಖೋಟಾ ನೋಟು ಪತ್ತೆಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.