ADVERTISEMENT

ಗಣಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2011, 19:30 IST
Last Updated 13 ಸೆಪ್ಟೆಂಬರ್ 2011, 19:30 IST

ತುಮಕೂರು: ಆಂಧ್ರದಲ್ಲಿ ನಡೆದಿರುವ ಅಕ್ರಮ ಗಣಿಗಾರಿಕೆ ಕುರಿತು ತನಿಖೆ ನಡೆಸುತ್ತಿರುವ ಸಿಬಿಐ ತನಿಖೆಯನ್ನು ಯಾವುದೇ ಕಾರಣಕ್ಕೂ ಸಡಿಲಗೊಳಿಸಬಾರದು. ರಾಜ್ಯದ ಅಕ್ರಮ ಗಣಿಗಾರಿಕೆ ಕುರಿತ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಸರ್ಕಾರವನ್ನು ಕಾಂಗ್ರೆಸ್ ಒತ್ತಾಯಿಸಲಿದೆ.

ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರು ಸಿಬಿಐ ತನಿಖೆಗೆ ವಹಿಸದಿದ್ದರೆ ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದವರನ್ನು ರಕ್ಷಿಸಲು ಹೊರಟಿದ್ದಾರೆ ಎಂದೇ ತಿಳಿಯಬೇಕಾಗುತ್ತದೆ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಬಂಧನದಲ್ಲಿರುವ ಮಾಜಿ ಸಚಿವ ಜನಾರ್ದನರೆಡ್ಡಿ ವಿರುದ್ಧದ ತನಿಖೆಯನ್ನು ಸಿಬಿಐ ಸಡಿಲಗೊಳಿಸಬಾರದು. ದೇಶದ ಕಡುಭ್ರಷ್ಟ ಜನಾರ್ದನರೆಡ್ಡಿ ಅವರಿಗೆ ಶಿಕ್ಷೆ ಆಗಲೇಬೇಕು ಎಂದರು.

ರಾಜ್ಯದ ಬೇಲೇಕೇರಿಯಲ್ಲಿ 5 ಲಕ್ಷ ಟನ್ ಅದಿರನ್ನು ಹೊರ ದೇಶಗಳಿಗೆ ಸಾಗಿಸಿರುವ ಪ್ರಕರಣದಲ್ಲಿ ಜನಾರ್ದನರೆಡ್ಡಿ ಕೈವಾಡವಿದೆ ಎಂದು ತನಿಖಾ ಸಂಸ್ಥೆಗಳು ತಿಳಿಸಿರುವ ಹಿನ್ನೆಲೆಯಲ್ಲಿ ಸಿಬಿಐ ತನಿಖೆಗೆ ವಹಿಸುವುದು ಸೂಕ್ತ ಎಂದು ಒತ್ತಾಯಿಸಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಿರೀಕ್ಷಣಾ ಜಾಮೀನು ಹೈಕೋರ್ಟ್ ತಿರಸ್ಕರಿಸಿದ್ದು, ಅವರು ಜೈಲಿಗೆ ಹೋಗಲಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT